< ಕೀರ್ತನೆಗಳು 104 >
1 ೧ ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
Áldjad, én lelkem, az Örökkévalót! Örökkévaló, én Istenem, felette nagy vagy, fenséget és díszt öltöttél.
2 ೨ ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.
Világosságba burkolózik, mint palástba, kiterjeszti az eget, mint a szőnyeget.
3 ೩ ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.
Aki vizekben gerendázta emeleteit, aki fellegeket tesz szekerévé, aki jár a szélnek szárnyain.
4 ೪ ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.
Szeleket tesz követeivé, szolgáivá lobogó tüzet.
5 ೫ ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.
Talapzataira alapította a földet, hogy meg ne inogjon mindörökké.
6 ೬ ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.
Vízárral, mint ruhával takartad be, a hegyeken vizek állnak;
7 ೭ ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,
dorgálásodtól megfutamodnak, dörgésed hangjától szétsietnek –
8 ೮ ಪರ್ವತಗಳು ಎದ್ದವು; ತಗ್ಗುಗಳು ಇಳಿದವು.
felemelkednek hegyek, alá sülyednek síkságok – arra a helyre, melyet alapítottál nekik.
9 ೯ ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.
Határt vetettél, hogy át ne lépjék, hogy újra be ne borítsák a földet.
10 ೧೦ ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ.
Aki forrásokat bocsát a völgyekbe, hegyek között folynak.
11 ೧೧ ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.
Itatják minden vadját a mezőnek, vadszamarak a szomjukat oltják.
12 ೧೨ ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.
Fölöttük lakozik az ég madara, a lombok közül hangot hallatnak.
13 ೧೩ ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.
Megitatja a hegyeket emeleteiből, műveid gyümölcséből jóllakik a föld.
14 ೧೪ ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,
Füvet sarjaszt a baromnak, meg növényt az ember munkája által, előhozván kenyeret a földből,
15 ೧೫ ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
és bort, mely örvendezteti halandónak szívét, fénylővé tevén az arczot olajtól, a kenyér pedig erősíti a halandónak szívét.
16 ೧೬ ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.
Jóllaknak az Örökkévaló fái, Libánonnak czédrusai, melyeket ültetett;
17 ೧೭ ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.
ahol madarak fészkelnek, a gólya – cziprusfák a háza.
18 ೧೮ ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.
A magas hegyek a zergéknek valók, a sziklák menedékül a hegyi nyulaknak.
19 ೧೯ ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.
Teremtette a holdat ünnepek számára, a nap ismeri lementét;
20 ೨೦ ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.
szerzesz sötétséget s lészen éjszaka, akkor mozog minden vadja az erdőnek.
21 ೨೧ ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.
Fiatal oroszlánok ordítanak ragadmányért, így kérvén Istentől eledelöket.
22 ೨೨ ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.
Felsüt a nap visszahúzódnak és tanyáikba heverednek.
23 ೨೩ ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; ಸಾಯಂಕಾಲದವರೆಗೆ ದುಡಿಯುತ್ತಾನೆ.
Dolgára kimegy az ember és munkájára egész estig.
24 ೨೪ ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.
Mily számosak a te műveid, Örökkévaló! Mindnyáját bölcseséggel teremtetted, telve van a föld szerzeményeddel.
25 ೨೫ ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.
Emitt a tenger, nagy és széles határú: ott van csúszó-mászó és száma sincs, kicsiny állatok nagyokkal együtt.
26 ೨೬ ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.
Ott hajók járnak, a leviátán, melyet alkottál, hogy játszadozzon abban.
27 ೨೭ ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.
Mindnyájan hozzád reménykednek, hogy megadjad eledelöket a maga idején. –
28 ೨೮ ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.
Adsz nekik szedegetnek; megnyitod kezedet: megtelnek jóval.
29 ೨೯ ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.
Elrejted arczodat: megrémülnek; visszavonod leheletüket: kimúlnak s porukhoz térnek vissza.
30 ೩೦ ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.
Kibocsátod leheletedet: megteremtetnek; így újítod meg a föld színét.
31 ೩೧ ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.
Legyen az Örökkévaló dicsősége örökre, örüljön az Örökkévaló az ő művein!
32 ೩೨ ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.
Aki letekintett a földre s az megrengett, megérinti a hegyeket és füstölögnek.
33 ೩೩ ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.
Hadd énekelek az Örökkévalónak életemben, hadd zengek Istenemnek, amíg vagyok!
34 ೩೪ ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.
Legyen kellemes neki beszédem; én örüljek az Örökkévalóban.
35 ೩೫ ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.
Veszszenek a vétkesek a földről, s gonoszok ne legyenek többé! Áldjad, én lelkem, az Örökkévalót! Halleluja!