< ಕೀರ್ತನೆಗಳು 106 >

1 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
הַֽלְלוּיָ֨הּ ׀ הוֹד֣וּ לַיהוָ֣ה כִּי־ט֑וֹב כִּ֖י לְעוֹלָ֣ם חַסְדּֽוֹ׃
2 ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?
מִ֗י יְ֭מַלֵּל גְּבוּר֣וֹת יְהוָ֑ה יַ֝שְׁמִ֗יעַ כָּל־תְּהִלָּתֽוֹ׃
3 ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.
אַ֭שְׁרֵי שֹׁמְרֵ֣י מִשְׁפָּ֑ט עֹשֵׂ֖ה צְדָקָ֣ה בְכָל־עֵֽת׃
4 ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,
זָכְרֵ֣נִי יְ֭הוָה בִּרְצ֣וֹן עַמֶּ֑ךָ פָּ֝קְדֵ֗נִי בִּישׁוּעָתֶֽךָ׃
5 ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
לִרְא֤וֹת ׀ בְּט֘וֹבַ֤ת בְּחִירֶ֗יךָ לִ֭שְׂמֹחַ בְּשִׂמְחַ֣ת גּוֹיֶ֑ךָ לְ֝הִתְהַלֵּ֗ל עִם־נַחֲלָתֶֽךָ׃
6 ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
חָטָ֥אנוּ עִם־אֲבוֹתֵ֗ינוּ הֶעֱוִ֥ינוּ הִרְשָֽׁעְנוּ׃
7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
אֲב֘וֹתֵ֤ינוּ בְמִצְרַ֨יִם ׀ לֹא־הִשְׂכִּ֬ילוּ נִפְלְאוֹתֶ֗יךָ לֹ֣א זָ֭כְרוּ אֶת־רֹ֣ב חֲסָדֶ֑יךָ וַיַּמְר֖וּ עַל־יָ֣ם בְּיַם־סֽוּף׃
8 ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.
וַֽ֭יּוֹשִׁיעֵם לְמַ֣עַן שְׁמ֑וֹ לְ֝הוֹדִ֗יעַ אֶת־גְּבוּרָתֽוֹ׃
9 ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
וַיִּגְעַ֣ר בְּיַם־ס֭וּף וַֽיֶּחֱרָ֑ב וַיּוֹלִיכֵ֥ם בַּ֝תְּהֹמ֗וֹת כַּמִּדְבָּֽר׃
10 ೧೦ ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು.
וַֽ֭יּוֹשִׁיעֵם מִיַּ֣ד שׂוֹנֵ֑א וַ֝יִּגְאָלֵ֗ם מִיַּ֥ד אוֹיֵֽב׃
11 ೧೧ ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.
וַיְכַסּוּ־מַ֥יִם צָרֵיהֶ֑ם אֶחָ֥ד מֵ֝הֶ֗ם לֹ֣א נוֹתָֽר׃
12 ೧೨ ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
וַיַּאֲמִ֥ינוּ בִדְבָרָ֑יו יָ֝שִׁ֗ירוּ תְּהִלָּתֽוֹ׃
13 ೧೩ ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,
מִֽ֭הֲרוּ שָׁכְח֣וּ מַעֲשָׂ֑יו לֹֽא־חִ֝כּ֗וּ לַעֲצָתֽוֹ׃
14 ೧೪ ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.
וַיִּתְאַוּ֣וּ תַ֭אֲוָה בַּמִּדְבָּ֑ר וַיְנַסּוּ־אֵ֝֗ל בִּֽישִׁימֽוֹן׃
15 ೧೫ ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
וַיִּתֵּ֣ן לָ֭הֶם שֶׁאֱלָתָ֑ם וַיְשַׁלַּ֖ח רָז֣וֹן בְּנַפְשָֽׁם׃
16 ೧೬ ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
וַיְקַנְא֣וּ לְ֭מֹשֶׁה בַּֽמַּחֲנֶ֑ה לְ֝אַהֲרֹ֗ן קְד֣וֹשׁ יְהוָֽה׃
17 ೧೭ ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.
תִּפְתַּח־אֶ֭רֶץ וַתִּבְלַ֣ע דָּתָ֑ן וַ֝תְּכַ֗ס עַל־עֲדַ֥ת אֲבִירָֽם׃
18 ೧೮ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
וַתִּבְעַר־אֵ֥שׁ בַּעֲדָתָ֑ם לֶ֝הָבָ֗ה תְּלַהֵ֥ט רְשָׁעִֽים׃
19 ೧೯ ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.
יַעֲשׂוּ־עֵ֥גֶל בְּחֹרֵ֑ב וַ֝יִּשְׁתַּחֲו֗וּ לְמַסֵּכָֽה׃
20 ೨೦ ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು.
וַיָּמִ֥ירוּ אֶת־כְּבוֹדָ֑ם בְּתַבְנִ֥ית שׁ֝֗וֹר אֹכֵ֥ל עֵֽשֶׂב׃
21 ೨೧ ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
שָׁ֭כְחוּ אֵ֣ל מוֹשִׁיעָ֑ם עֹשֶׂ֖ה גְדֹל֣וֹת בְּמִצְרָֽיִם׃
22 ೨೨ ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
נִ֭פְלָאוֹת בְּאֶ֣רֶץ חָ֑ם נ֝וֹרָא֗וֹת עַל־יַם־סֽוּף׃
23 ೨೩ ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
וַיֹּ֗אמֶר לְֽהַשְׁמִ֫ידָ֥ם לוּלֵ֡י מֹ֘שֶׁ֤ה בְחִיר֗וֹ עָמַ֣ד בַּפֶּ֣רֶץ לְפָנָ֑יו לְהָשִׁ֥יב חֲ֝מָת֗וֹ מֵֽהַשְׁחִֽית׃
24 ೨೪ ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.
וַֽ֭יִּמְאֲסוּ בְּאֶ֣רֶץ חֶמְדָּ֑ה לֹֽא־הֶ֝אֱמִ֗ינוּ לִדְבָרֽוֹ׃
25 ೨೫ ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
וַיֵּרָגְנ֥וּ בְאָהֳלֵיהֶ֑ם לֹ֥א שָׁ֝מְע֗וּ בְּק֣וֹל יְהוָֽה׃
26 ೨೬ ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,
וַיִּשָּׂ֣א יָד֣וֹ לָהֶ֑ם לְהַפִּ֥יל א֝וֹתָ֗ם בַּמִּדְבָּֽר׃
27 ೨೭ ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
וּלְהַפִּ֣יל זַ֭רְעָם בַּגּוֹיִ֑ם וּ֝לְזָרוֹתָ֗ם בָּאֲרָצֽוֹת׃
28 ೨೮ ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
וַ֭יִּצָּ֣מְדוּ לְבַ֣עַל פְּע֑וֹר וַ֝יֹּאכְל֗וּ זִבְחֵ֥י מֵתִֽים׃
29 ೨೯ ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.
וַ֭יַּכְעִיסוּ בְּמַֽעַלְלֵיהֶ֑ם וַתִּפְרָץ־בָּ֝֗ם מַגֵּפָֽה׃
30 ೩೦ ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.
וַיַּעֲמֹ֣ד פִּֽ֭ינְחָס וַיְפַלֵּ֑ל וַ֝תֵּעָצַ֗ר הַמַּגֵּפָֽה׃
31 ೩೧ ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.
וַתֵּחָ֣שֶׁב ל֭וֹ לִצְדָקָ֑ה לְדֹ֥ר וָ֝דֹ֗ר עַד־עוֹלָֽם׃
32 ೩೨ ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.
וַ֭יַּקְצִיפוּ עַל־מֵ֥י מְרִיבָ֑ה וַיֵּ֥רַע לְ֝מֹשֶׁ֗ה בַּעֲבוּרָֽם׃
33 ೩೩ ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
כִּֽי־הִמְר֥וּ אֶת־רוּח֑וֹ וַ֝יְבַטֵּ֗א בִּשְׂפָתָֽיו׃
34 ೩೪ ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,
לֹֽא־הִ֭שְׁמִידוּ אֶת־הָֽעַמִּ֑ים אֲשֶׁ֤ר אָמַ֖ר יְהוָ֣ה לָהֶֽם׃
35 ೩೫ ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.
וַיִּתְעָרְב֥וּ בַגּוֹיִ֑ם וַֽ֝יִּלְמְד֗וּ מַֽעֲשֵׂיהֶֽם׃
36 ೩೬ ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.
וַיַּעַבְד֥וּ אֶת־עֲצַבֵּיהֶ֑ם וַיִּהְי֖וּ לָהֶ֣ם לְמוֹקֵֽשׁ׃
37 ೩೭ ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.
וַיִּזְבְּח֣וּ אֶת־בְּ֭נֵיהֶם וְאֶת־בְּנֽוֹתֵיהֶ֗ם לַשֵּֽׁדִים׃
38 ೩೮ ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.
וַיִּֽשְׁפְּכ֨וּ דָ֪ם נָקִ֡י דַּם־בְּנֵ֘יהֶ֤ם וּֽבְנוֹתֵיהֶ֗ם אֲשֶׁ֣ר זִ֭בְּחוּ לַעֲצַבֵּ֣י כְנָ֑עַן וַתֶּחֱנַ֥ף הָ֝אָ֗רֶץ בַּדָּמִֽים׃
39 ೩೯ ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.
וַיִּטְמְא֥וּ בְמַעֲשֵׂיהֶ֑ם וַ֝יִּזְנוּ֗ בְּמַֽעַלְלֵיהֶֽם׃
40 ೪೦ ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
וַיִּֽחַר־אַ֣ף יְהוָ֣ה בְּעַמּ֑וֹ וַ֝יְתָעֵ֗ב אֶת־נַחֲלָתֽוֹ׃
41 ೪೧ ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;
וַיִּתְּנֵ֥ם בְּיַד־גּוֹיִ֑ם וַֽיִּמְשְׁל֥וּ בָ֝הֶ֗ם שֹׂנְאֵיהֶֽם׃
42 ೪೨ ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.
וַיִּלְחָצ֥וּם אוֹיְבֵיהֶ֑ם וַ֝יִּכָּנְע֗וּ תַּ֣חַת יָדָֽם׃
43 ೪೩ ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
פְּעָמִ֥ים רַבּ֗וֹת יַצִּ֫ילֵ֥ם וְ֭הֵמָּה יַמְר֣וּ בַעֲצָתָ֑ם וַ֝יָּמֹ֗כּוּ בַּעֲוֹנָֽם׃
44 ೪೪ ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.
וַ֭יַּרְא בַּצַּ֣ר לָהֶ֑ם בְּ֝שָׁמְע֗וֹ אֶת־רִנָּתָֽם׃
45 ೪೫ ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
וַיִּזְכֹּ֣ר לָהֶ֣ם בְּרִית֑וֹ וַ֝יִּנָּחֵ֗ם כְּרֹ֣ב חֲסָדָֽיו׃
46 ೪೬ ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.
וַיִּתֵּ֣ן אוֹתָ֣ם לְרַחֲמִ֑ים לִ֝פְנֵ֗י כָּל־שׁוֹבֵיהֶֽם׃
47 ೪೭ ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
הוֹשִׁיעֵ֨נוּ ׀ יְה֘וָ֤ה אֱלֹהֵ֗ינוּ וְקַבְּצֵנוּ֮ מִֽן־הַגּ֫וֹיִ֥ם לְ֭הֹדוֹת לְשֵׁ֣ם קָדְשֶׁ֑ךָ לְ֝הִשְׁתַּבֵּ֗חַ בִּתְהִלָּתֶֽךָ׃
48 ೪೮ ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!
בָּר֤וּךְ־יְהוָ֨ה אֱלֹהֵ֪י יִשְׂרָאֵ֡ל מִן־הָ֤עוֹלָ֨ם ׀ וְעַ֬ד הָעוֹלָ֗ם וְאָמַ֖ר כָּל־הָעָ֥ם אָמֵ֗ן הַֽלְלוּ־יָֽהּ׃

< ಕೀರ್ತನೆಗಳು 106 >