< ಕೀರ್ತನೆಗಳು 108 >

1 ದಾವೀದನ ಕೀರ್ತನೆ. ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!
Песен. Давидов псалом. Непоколебимо е сърцето ми, Боже; Ще пея, а още ще славословя, с душата си
2 ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
Събуди се псалтирю и арфо; Сам аз ще се събудя на ранина.
3 ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
Ще Те хваля, Господи, между племената; Ще те славословя между народите.
4 ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
Защото Твоята милост е по-велика от небесата, И Твоята вярност стига до облаците.
5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
Възнеси се, Боже, над небесата; Славата Ти нека бъде по цялата земя.
6 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
За да се избавят Твоите възлюбени. Спаси с десницата Си, и послушай ни.
7 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.
Бог говори със светостта Си; затова, аз ще тържествувам; Ще разделя Сихем, ще размеря долината Сикхот;
8 ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
Мой е Галаад, мой е Манасия, Ефрем тоже е защита на главата ми, Юда е скиптър мой;
9 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.
Моав е умивалникът ми, На Едом ще хвърля обувката си, Ще възкликна над филистимската земя.
10 ೧೦ ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
Кой ще ме въведе в укрепения град? Кой ще ме заведе до Едом?
11 ೧೧ ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ?
Не Ти ли, Боже, Който си ни отхвърлил, И не излизаш вече, о Боже, с войските ни?
12 ೧೨ ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.
Помогни ни срещу противника, Защото суетна е човешката помощ.
13 ೧೩ ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
Чрез Бога ще вървим юнашки, Защото Той е, Който ще стъпче противниците ни.

< ಕೀರ್ತನೆಗಳು 108 >