< ಕೀರ್ತನೆಗಳು 108 >
1 ೧ ದಾವೀದನ ಕೀರ್ತನೆ. ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!
Waƙa ce. Zabura ta Dawuda. Zuciyata tsayayyiya ce, ya Allah; zan rera in kuma yi kiɗi da dukan raina.
2 ೨ ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
Ku farka, garaya da molo! Zan farkar da rana.
3 ೩ ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
Zan yabe ka, ya Ubangiji, a cikin al’ummai; zan rera game da kai cikin mutane.
4 ೪ ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
Gama ƙaunarka da girma take, bisa fiye da sammai; amincinka ya kai sarari.
5 ೫ ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
A ɗaukaka ka, ya Allah, a bisa sammai, bari kuma ɗaukakarka ta kasance a bisa dukan duniya.
6 ೬ ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
Ka cece mu ka kuma taimake mu da hannunka na dama, domin waɗanda kake ƙauna su kuɓuta.
7 ೭ ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.
Allah ya yi magana daga wurinsa mai tsarki, “Ciki nasara zan raba Shekem in kuma auna Kwarin Sukkot.
8 ೮ ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
Gileyad nawa ne, Manasse nawa ne; Efraim shi hulan kwanona, Yahuda ne sandana na sarauta.
9 ೯ ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.
Mowab shi ne kwanon wankina, a kan Edom zan jefa takalmina; a bisa Filistiya zan yi kirari cikin nasara.”
10 ೧೦ ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
Wa zai kawo ni birni mai katanga? Wa zai jagorance ni zuwa Edom?
11 ೧೧ ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ?
Ba kai ba ne, ya Allah, kai da ka ƙi mu ba ka kuwa fita tare da mayaƙanmu?
12 ೧೨ ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.
Ka ba mu taimako a kan abokin gāba, gama taimakon mutum banza ne.
13 ೧೩ ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
Tare da Allah za mu yi nasara, zai kuma tattaka abokan gābanmu.