< ಕೀರ್ತನೆಗಳು 109 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.
לַ֭מְנַצֵּחַ לְדָוִ֣ד מִזְמ֑וֹר אֱלֹהֵ֥י תְ֝הִלָּתִ֗י אַֽל־תֶּחֱרַֽשׁ׃
2 ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.
כִּ֤י פִ֪י רָשָׁ֡ע וּֽפִי־מִ֭רְמָה עָלַ֣י פָּתָ֑חוּ דִּבְּר֥וּ אִ֝תִּ֗י לְשׁ֣וֹן שָֽׁקֶר׃
3 ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.
וְדִבְרֵ֣י שִׂנְאָ֣ה סְבָב֑וּנִי וַיִּֽלָּחֲמ֥וּנִי חִנָּֽם׃
4 ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.
תַּֽחַת־אַהֲבָתִ֥י יִשְׂטְנ֗וּנִי וַאֲנִ֥י תְפִלָּֽה׃
5 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.
וַיָּ֘שִׂ֤ימוּ עָלַ֣י רָ֭עָה תַּ֣חַת טוֹבָ֑ה וְ֝שִׂנְאָ֗ה תַּ֣חַת אַהֲבָתִֽי׃
6 ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
הַפְקֵ֣ד עָלָ֣יו רָשָׁ֑ע וְ֝שָׂטָ֗ן יַעֲמֹ֥ד עַל־יְמִינֽוֹ׃
7 ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.
בְּ֭הִשָּׁ֣פְטוֹ יֵצֵ֣א רָשָׁ֑ע וּ֝תְפִלָּת֗וֹ תִּהְיֶ֥ה לַֽחֲטָאָֽה׃
8 ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.
יִֽהְיֽוּ־יָמָ֥יו מְעַטִּ֑ים פְּ֝קֻדָּת֗וֹ יִקַּ֥ח אַחֵֽר׃
9 ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.
יִֽהְיוּ־בָנָ֥יו יְתוֹמִ֑ים וְ֝אִשְׁתּוֹ אַלְמָנָֽה׃
10 ೧೦ ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.
וְנ֤וֹעַ יָנ֣וּעוּ בָנָ֣יו וְשִׁאֵ֑לוּ וְ֝דָרְשׁ֗וּ מֵחָרְבוֹתֵיהֶֽם׃
11 ೧೧ ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.
יְנַקֵּ֣שׁ נ֭וֹשֶׁה לְכָל־אֲשֶׁר־ל֑וֹ וְיָבֹ֖זּוּ זָרִ֣ים יְגִיעֽוֹ׃
12 ೧೨ ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,
אַל־יְהִי־ל֭וֹ מֹשֵׁ֣ךְ חָ֑סֶד וְֽאַל־יְהִ֥י ח֝וֹנֵ֗ן לִיתוֹמָֽיו׃
13 ೧೩ ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.
יְהִֽי־אַחֲרִית֥וֹ לְהַכְרִ֑ית בְּד֥וֹר אַ֝חֵ֗ר יִמַּ֥ח שְׁמָֽם׃
14 ೧೪ ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.
יִזָּכֵ֤ר ׀ עֲוֺ֣ן אֲ֭בֹתָיו אֶל־יְהוָ֑ה וְחַטַּ֥את אִ֝מּ֗וֹ אַל־תִּמָּֽח׃
15 ೧೫ ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.
יִהְי֣וּ נֶֽגֶד־יְהוָ֣ה תָּמִ֑יד וְיַכְרֵ֖ת מֵאֶ֣רֶץ זִכְרָֽם׃
16 ೧೬ ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.
יַ֗עַן אֲשֶׁ֤ר ׀ לֹ֥א זָכַר֮ עֲשׂ֪וֹת חָ֥סֶד וַיִּרְדֹּ֡ף אִישׁ־עָנִ֣י וְ֭אֶבְיוֹן וְנִכְאֵ֨ה לֵבָ֬ב לְמוֹתֵֽת׃
17 ೧೭ ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!
וַיֶּאֱהַ֣ב קְ֭לָלָה וַתְּבוֹאֵ֑הוּ וְֽלֹא־חָפֵ֥ץ בִּ֝בְרָכָ֗ה וַתִּרְחַ֥ק מִמֶּֽנּוּ׃
18 ೧೮ ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.
וַיִּלְבַּ֥שׁ קְלָלָ֗ה כְּמַ֫דּ֥וֹ וַתָּבֹ֣א כַמַּ֣יִם בְּקִרְבּ֑וֹ וְ֝כַשֶּׁ֗מֶן בְּעַצְמוֹתָֽיו׃
19 ೧೯ ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.
תְּהִי־ל֭וֹ כְּבֶ֣גֶד יַעְטֶ֑ה וּ֝לְמֵ֗זַח תָּמִ֥יד יַחְגְּרֶֽהָ׃
20 ೨೦ ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.
זֹ֤את פְּעֻלַּ֣ת שֹׂ֭טְנַי מֵאֵ֣ת יְהוָ֑ה וְהַדֹּבְרִ֥ים רָ֝֗ע עַל־נַפְשִֽׁי׃
21 ೨೧ ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.
וְאַתָּ֤ה ׀ יְה֘וִ֤ה אֲדֹנָ֗י עֲֽשֵׂה־אִ֭תִּי לְמַ֣עַן שְׁמֶ֑ךָ כִּי־ט֥וֹב חַ֝סְדְּךָ֗ הַצִּילֵֽנִי׃
22 ೨೨ ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.
כִּֽי־עָנִ֣י וְאֶבְי֣וֹן אָנֹ֑כִי וְ֝לִבִּ֗י חָלַ֥ל בְּקִרְבִּֽי׃
23 ೨೩ ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.
כְּצֵל־כִּנְטוֹת֥וֹ נֶהֱלָ֑כְתִּי נִ֝נְעַ֗רְתִּי כָּֽאַרְבֶּֽה׃
24 ೨೪ ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.
בִּ֭רְכַּי כָּשְׁל֣וּ מִצּ֑וֹם וּ֝בְשָׂרִ֗י כָּחַ֥שׁ מִשָּֽׁמֶן׃
25 ೨೫ ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.
וַאֲנִ֤י ׀ הָיִ֣יתִי חֶרְפָּ֣ה לָהֶ֑ם יִ֝רְא֗וּנִי יְנִיע֥וּן רֹאשָֽׁם׃
26 ೨೬ ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.
עָ֭זְרֵנִי יְהוָ֣ה אֱלֹהָ֑י ה֭וֹשִׁיעֵ֣נִי כְחַסְדֶּֽךָ׃
27 ೨೭ ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.
וְֽ֭יֵדְעוּ כִּי־יָ֣דְךָ זֹּ֑את אַתָּ֖ה יְהוָ֣ה עֲשִׂיתָֽהּ׃
28 ೨೮ ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.
יְקַֽלְלוּ־הֵמָּה֮ וְאַתָּ֪ה תְבָ֫רֵ֥ךְ קָ֤מוּ ׀ וַיֵּבֹ֗שׁוּ וְֽעַבְדְּךָ֥ יִשְׂמָֽח׃
29 ೨೯ ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.
יִלְבְּשׁ֣וּ שׂוֹטְנַ֣י כְּלִמָּ֑ה וְיַעֲט֖וּ כַמְעִ֣יל בָּשְׁתָּֽם׃
30 ೩೦ ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.
א֘וֹדֶ֤ה יְהוָ֣ה מְאֹ֣ד בְּפִ֑י וּבְת֖וֹךְ רַבִּ֣ים אֲהַֽלְלֶֽנּוּ׃
31 ೩೧ ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.
כִּֽי־יַ֭עֲמֹד לִימִ֣ין אֶבְי֑וֹן לְ֝הוֹשִׁ֗יעַ מִשֹּׁפְטֵ֥י נַפְשֽׁוֹ׃

< ಕೀರ್ತನೆಗಳು 109 >