< ಕೀರ್ತನೆಗಳು 109 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.
Przewodnikowi chóru. Psalm Dawida. Boże mojej chwały, nie milcz;
2 ೨ ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.
Bo otworzyły się przeciwko mnie usta niegodziwego i usta podstępnego; mówili przeciwko mnie językiem kłamliwym;
3 ೩ ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.
Otoczyli mnie słowami nienawiści i walczą przeciwko mnie bez przyczyny.
4 ೪ ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.
Sprzeciwiają mi się w zamian za moją miłość, choć ja się [za nich] modliłem.
5 ೫ ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.
Odpłacają mi złem za dobro i nienawiścią za moją miłość.
6 ೬ ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
Postaw nad nim niegodziwego, a szatan niech stoi po jego prawicy.
7 ೭ ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.
Gdy stanie przed sądem, niech wyjdzie potępiony, a jego modlitwa niech zamieni się w grzech.
8 ೮ ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.
Niech jego dni będą krótkie, a jego urząd niech przejmie inny.
9 ೯ ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.
Niech jego dzieci będą sierotami, a jego żona wdową.
10 ೧೦ ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.
Niech jego dzieci będą tułaczami i żebrzą, niech żebrzą [z dala] od swoich opustoszałych miejsc.
11 ೧೧ ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.
Niech lichwiarz przejmie wszystko, co ma, a obcy niech rozgrabią [owoc] jego pracy.
12 ೧೨ ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,
Niech nie będzie nikogo, kto by mu okazał miłosierdzie; niech nie będzie nikogo, kto by się zlitował nad jego sierotami.
13 ೧೩ ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.
Niech jego potomkowie zostaną wykorzenieni, niech ich imię zginie w drugim pokoleniu.
14 ೧೪ ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.
Niech PAN pamięta nieprawość jego przodków, a grzech jego matki niech nie będzie zgładzony.
15 ೧೫ ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.
Niech będą zawsze przed PANEM, aż wykorzeni z ziemi pamięć o nich;
16 ೧೬ ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.
Dlatego że nie pamiętał, by okazać miłosierdzie, ale prześladował człowieka nędznego i ubogiego, a strapionego w sercu chciał zabić.
17 ೧೭ ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!
Skoro umiłował przekleństwo, niech na niego spadnie; [skoro] nie chciał błogosławieństwa, niech się od niego oddali.
18 ೧೮ ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.
Ubierał się w przekleństwo jak w szatę, więc niech wejdzie jak woda do jego wnętrzności i jak oliwa do jego kości.
19 ೧೯ ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.
Niech mu będzie jak płaszcz, który go okrywa, i jak pas, który go zawsze opasuje.
20 ೨೦ ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.
Taka niech będzie zapłata od PANA dla moich przeciwników i tych, którzy źle mówią przeciwko mojej duszy.
21 ೨೧ ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.
Ale ty, BOŻE, Panie, ujmij się za mną przez wzgląd na twoje imię; ocal mnie, bo wielkie jest twoje miłosierdzie.
22 ೨೨ ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.
[Jestem] bowiem ubogi i nędzny, a moje serce we mnie jest zranione.
23 ೨೩ ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.
Niknę jak cień, który się chyli, strząsają mnie jak szarańczę.
24 ೨೪ ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.
Moje kolana słabną od postu, a moje ciało wychudło bez tłuszczu.
25 ೨೫ ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.
Stałem się też dla nich pośmiewiskiem; [gdy] mnie widzą, kiwają głowami.
26 ೨೬ ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.
Wspomóż mnie, PANIE, mój Boże; wybaw mnie według swego miłosierdzia;
27 ೨೭ ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.
Aby mogli poznać, że to twoja ręka; że ty, PANIE, to uczyniłeś.
28 ೨೮ ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.
Niech oni przeklinają, ale ty błogosław; [gdy] powstają, niech będą zawstydzeni, a twój sługa niech się weseli.
29 ೨೯ ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.
Niech moi przeciwnicy okryją się hańbą i niech się okryją własnym wstydem jak płaszczem.
30 ೩೦ ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.
Będę wielce wysławiał PANA swymi ustami i pośród tłumu będę go chwalić;
31 ೩೧ ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.
Bo staje po prawicy nędznego, aby go wybawić od tych, którzy osądzają jego duszę.