< ಕೀರ್ತನೆಗಳು 11 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?
Zborovođi. Psalam. Davidov. Jahvi se utječem! Zašto dakle govorite duši mojoj: “Odleti u goru kao ptica!
2 ೨ ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.
Gle, bezbožnici već luk napeše, za tetivu strijelu zapeše da iz potaje ustrijele pravednika.
3 ೩ ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?
Kad su temelji uzljuljani, što da učini pravednik?”
4 ೪ ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.
Jahve je u svom svetom Hramu, na nebeskom sjedi prijestolju. Oči njegove motre, vjeđama proniče sinove ljudske.
5 ೫ ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
Jahve proniče pravedna i nepravedna, iz dna duše mrzi silnika.
6 ೬ ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.
Na grešnike će izlit' žeravu i sumpor, vjetar ognjeni bit će dio njine sudbine.
7 ೭ ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.
Pravedan je Jahve i pravednost ljubi, čestiti će gledat' lice njegovo.