< ಕೀರ್ತನೆಗಳು 11 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?
לַמְנַצֵּ֗חַ לְדָ֫וִ֥ד בַּֽיהוָ֨ה ׀ חָסִ֗יתִי אֵ֭יךְ תֹּאמְר֣וּ לְנַפְשִׁ֑י נ֝֗וּדִי הַרְכֶ֥ם צִפּֽוֹר׃
2 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.
כִּ֤י הִנֵּ֪ה הָרְשָׁעִ֡ים יִדְרְכ֬וּן קֶ֗שֶׁת כּוֹנְנ֣וּ חִצָּ֣ם עַל־יֶ֑תֶר לִיר֥וֹת בְּמוֹ־אֹ֝֗פֶל לְיִשְׁרֵי־לֵֽב׃
3 ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?
כִּ֣י הַ֭שָּׁתוֹת יֵֽהָרֵס֑וּן צַ֝דִּ֗יק מַה־פָּעָֽל׃
4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.
יְהוָ֤ה ׀ בְּֽהֵ֘יכַ֤ל קָדְשׁ֗וֹ יְהוָה֮ בַּשָּׁמַ֪יִם כִּ֫סְא֥וֹ עֵינָ֥יו יֶחֱז֑וּ עַפְעַפָּ֥יו יִ֝בְחֲנ֗וּ בְּנֵ֣י אָדָֽם׃
5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
יְהוָה֮ צַדִּ֪יק יִ֫בְחָ֥ן וְ֭רָשָׁע וְאֹהֵ֣ב חָמָ֑ס שָֽׂנְאָ֥ה נַפְשֽׁוֹ׃
6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.
יַמְטֵ֥ר עַל־רְשָׁעִ֗ים פַּ֫חִ֥ים אֵ֣שׁ וְ֭גָפְרִית וְר֥וּחַ זִלְעָפ֗וֹת מְנָ֣ת כּוֹסָֽם׃
7 ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.
כִּֽי־צַדִּ֣יק יְ֭הוָה צְדָק֣וֹת אָהֵ֑ב יָ֝שָׁ֗ר יֶחֱז֥וּ פָנֵֽימוֹ׃

< ಕೀರ್ತನೆಗಳು 11 >