< ಕೀರ್ತನೆಗಳು 110 >
1 ೧ ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
Salmo de Davi: O SENHOR disse a meu Senhor: Senta-te à minha direita, até que eu ponha teus inimigos por escabelo de teus pés.
2 ೨ ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.
O SENHOR enviará o cetro de tua força desde Sião, [dizendo]: Domina tu no meio de teus inimigos.
3 ೩ ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
Teu povo será voluntário no dia do teu poder; com santas honras, desde o ventre do amanhecer, tu [terás] o orvalho de tua juventude.
4 ೪ “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
O SENHOR jurou, e não se arrependerá: Tu és Sacerdote eterno, segundo a ordem de Melquisedeque.
5 ೫ ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.
O Senhor está à tua direita; ele ferirá aos reis no dia de sua ira.
6 ೬ ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.
Julgará entre as nações; ele [as] encherá de corpos mortos; [e] ferirá a cabeça de uma grande terra.
7 ೭ ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.
Ele beberá do ribeiro no caminho, então levantará a cabeça.