< ಕೀರ್ತನೆಗಳು 111 >
1 ೧ ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.
Hallelúja! Ég þakka Guði máttarverk hans, já, í áheyrn og augsýn allrar þjóðarinnar.
2 ೨ ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.
Allir sem vilja, íhugi þetta ásamt mér.
3 ೩ ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.
Því að máttarverkin lýsa mikilleika hans, hátign og eilífum kærleika.
4 ೪ ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
Hver getur gleymt dásemdarverkum hans, miskunn hans?
5 ೫ ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ
Hann annast þarfir þeirra sem honum treysta og gleymir ekki loforðum sínum.
6 ೬ ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
Hann sýndi mátt sinn er hann gaf þjóð sinni landið Ísrael – land sem margar þjóðir byggðu.
7 ೭ ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.
Allt gerir hann af trúfesti og réttlæti og öll fyrirmæli hans eru áreiðanleg og góð,
8 ೮ ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.
gefin í kærleika og af réttvísi – þau munu standa að eilífu.
9 ೯ ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.
Hann hefur frelsað þjóð sína og gert við hana eilífan sáttmála. Heilagt og óttalegt er nafn Drottins.
10 ೧೦ ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
Hvernig öðlast menn visku? Með því fyrst að óttast og heiðra Guð og síðan með því að halda lög hans. Lofað sé nafn hans að eilífu.