< ಕೀರ್ತನೆಗಳು 112 >
1 ೧ ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
Msifuni Yahwe. Amebarikiwa mtu yule anaye mtii Yahwe, apendezwaye sana na amri zake.
2 ೨ ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು.
Kizazi chake kitakuwa ni chenye nguvu duniani; kizazi cha mcha Mungu kitabarikiwa.
3 ೩ ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.
Nyumbani mwake mna utajiri na mali; na haki yake itadumu milele.
4 ೪ ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.
Nuru huangazia gizani kwa ajili ya mtu mcha Mungu; yeye ni wa fadhili, huruma, na haki.
5 ೫ ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
Heri atendaye fadhili na kukopesha, afanyaye mambo yake kwa uaminifu.
6 ೬ ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು.
Kwa maana hataondoshwa kamwe; mwenye haki atakumbukwa milele.
7 ೭ ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.
Haogopi habari mbaya; ni jasiri, akimtumainia Yahwe.
8 ೮ ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.
Moyo wake ni mtulivu, hana woga, mpaka aonapo ushindi dhidi ya watesi wake.
9 ೯ ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
Huwapa masikini kwa ukarimu; haki yake yadumu milele; atainuliwa kwa heshima.
10 ೧೦ ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.
Mtu mwovu ataona haya na kukasirika; atasaga meno yake na kuyeyuka; tamaa ya wasio haki itapotea.