< ಕೀರ್ತನೆಗಳು 113 >
1 ೧ ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.
Алілуя! Хваліть, раби Господні, хваліть ім’я Господа!
2 ೨ ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ.
Нехай буде ім’я Господнє благословенне віднині й повіки!
3 ೩ ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.
Від сходу сонця й до його заходу прославлене ім’я Господа!
4 ೪ ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
Господь піднісся високо над усіма народами, вище небес Його слава.
5 ೫ ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
Хто подібний до Господа, Бога нашого, Який, мешкаючи на висотах,
6 ೬ ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
схиляється подивитися на небеса і землю?
7 ೭ ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
Він піднімає із пилу вбогого, із купи сміття підносить бідняка,
8 ೮ ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
щоб посадити [його] зі шляхетними, зі шляхетними його народу.
9 ೯ ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!
Він неплідну жінку вселяє в дім радісною матір’ю дітей. Алілуя!