< ಕೀರ್ತನೆಗಳು 114 >

1 ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,
當以色列出離埃及時,雅各伯家離開蠻夷時,
2 ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು.
猶大成了上主的聖所,以色列成了祂的王國;
3 ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.
海洋見了,頓時逃溜,約旦立即回轉倒流。
4 ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.
山嶽跳躍如公羊,丘陵舞蹈似羔羊。
5 ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?
海洋,什麼使您逃溜。約旦,什麼叫您倒流?
6 ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?
山嶽,您們為什麼跳躍像公羊?丘陵,您們為什麼舞蹈似羔羊?
7 ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.
大地,您應該在上主的面前,在雅各伯的天主面前搖撼,
8 ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.
祂使磐石變為水潭,祂使礁石變成水泉。

< ಕೀರ್ತನೆಗಳು 114 >