< ಕೀರ್ತನೆಗಳು 115 >
1 ೧ ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
Не нама, Господе, не нама, него имену свом дај славу, по милости својој, по истини својој.
2 ೨ “ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು?
Зашто да говоре народи: Где ли је Бог њихов?
3 ೩ ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.
Бог је наш на небесима, твори све што хоће.
4 ೪ ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
Идоли су њихови сребро и злато, дело руку човечијих.
5 ೫ ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ.
Уста имају, а не говоре; очи имају, а не виде;
6 ೬ ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ.
Уши имају, а не чују; ноздрве имају, а не миришу;
7 ೭ ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ.
Руке имају, а не хватају; ноге имају, а не ходе, и не пуштају глас из грла свог.
8 ೮ ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.
Такви су и они који их граде, и сви који се уздају у њих.
9 ೯ ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
Доме Израиљев, уздај се у Господа; Он им је помоћ и штит.
10 ೧೦ ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
Доме Аронов, уздај се у Господа; Он им је помоћ и штит.
11 ೧೧ ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
Који се бојите Господа, уздајте се у Господа; Он им је помоћ и штит.
12 ೧೨ ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.
Господ нас се опомиње, благосиља нас, благосиља дом Израиљев, благосиља дом Аронов;
13 ೧೩ ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.
Благосиља оне који се боје Господа, мале и велике.
14 ೧೪ ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;
Да вам Господ умножи благослове, вама и синовима вашим!
15 ೧೫ ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.
Господ да вас благослови, Творац неба и земље!
16 ೧೬ ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.
Небо је небо Господње, а земљу је дао синовима човечијим.
17 ೧೭ ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.
Неће Те мртви хвалити, Господе, нити они који сиђу онамо где се ћути.
18 ೧೮ ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!
Него ћемо ми благосиљати Господа одсад и довека. Алилуја!