< ಕೀರ್ತನೆಗಳು 116 >
1 ೧ ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.
to love: lover for to hear: hear LORD [obj] voice my supplication my
2 ೨ ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.
for to stretch ear his to/for me and in/on/with day my to call: call to
3 ೩ ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. (Sheol )
to surround me cord death and terror hell: Sheol to find me distress and sorrow to find (Sheol )
4 ೪ ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.
and in/on/with name LORD to call: call to Please! LORD to escape [emph?] soul my
5 ೫ ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.
gracious LORD and righteous and God our to have compassion
6 ೬ ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.
to keep: guard simple LORD to languish and to/for me to save
7 ೭ ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.
to return: return soul my to/for resting your for LORD to wean upon you
8 ೮ ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,
for to rescue soul my from death [obj] eye my from tears [obj] foot my from falling
9 ೯ ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
to go: walk to/for face: before LORD in/on/with land: country/planet [the] alive
10 ೧೦ “ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,
be faithful for to speak: speak I to afflict much
11 ೧೧ “ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.
I to say in/on/with to hurry I all [the] man to lie
12 ೧೨ ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
what? to return: pay to/for LORD all benefit his upon me
13 ೧೩ ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
cup salvation to lift: raise and in/on/with name LORD to call: call to
14 ೧೪ ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
vow my to/for LORD to complete before [to] please to/for all people his
15 ೧೫ ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
precious in/on/with eye: seeing LORD [the] death [to] to/for pious his
16 ೧೬ ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
Please! LORD for I servant/slave your I servant/slave your son: child maidservant your to open to/for bond my
17 ೧೭ ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
to/for you to sacrifice sacrifice thanksgiving and in/on/with name LORD to call: call to
18 ೧೮ ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
vow my to/for LORD to complete before [to] please to/for all people his
19 ೧೯ ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!
in/on/with court house: temple LORD in/on/with midst your Jerusalem to boast: praise LORD