< ಕೀರ್ತನೆಗಳು 118 >

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.
Aleluja! Zahvaljujte Jahvi jer je dobar, jer je vječna ljubav njegova!
2 ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
Neka rekne dom Izraelov: “Vječna je ljubav njegova!”
3 ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
Neka rekne dom Aronov: “Vječna je ljubav njegova!”
4 ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
Svi koji se Jahve boje neka reknu: “Vječna je ljubav njegova!”
5 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
Iz tjeskobe Jahvu ja zazvah: on me usliša i oslobodi.
6 ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?
Jahve je sa mnom i ja ne strahujem: što mi tko može?
7 ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
Jahve je sa mnom, pomoć moja, i zbunjene gledam dušmane.
8 ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
Bolje se Jahvi uteći nego se uzdat' u čovjeka.
9 ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
Bolje se Jahvi uteći nego se uzdat' u mogućnike.
10 ೧೦ ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು.
Pogani me okružiše: imenom ih Jahvinim uništih.
11 ೧೧ ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.
Opkoliše me odasvud: imenom ih Jahvinim uništih.
12 ೧೨ ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
Opkoliše me poput pčela, ubod im žeže kao trnje zapaljeno: imenom ih Jahvinim uništih.
13 ೧೩ ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
Gurahu me, gurahu, da me obore, ali mi Jahve pomože.
14 ೧೪ ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.
Jahve je moja snaga i pjesma, on mi je spasitelj.
15 ೧೫ ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
Čuj! Radost i spasenje odzvanja šatorima pravednika: Jahvina se proslavi desnica,
16 ೧೬ ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
Jahvina me uzdigne desnica, Jahvina se proslavi desnica!
17 ೧೭ ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.
Ne, umrijeti neću nego živjeti i kazivat ću djela Jahvina.
18 ೧೮ ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.
Kaznom teškom kaznio me Jahve, ali me smrti ne preda.
19 ೧೯ ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
Otvorite mi širom vrata pravde: ući ću, Jahvi zahvalit'!
20 ೨೦ ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.
“Ovo su vrata Jahvina, na njih ulaze pravedni!”
21 ೨೧ ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.
Zahvalit ću ti što si me uslišio i moj postao spasitelj.
22 ೨೨ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;
Kamen što ga odbaciše graditelji postade kamen zaglavni.
23 ೨೩ ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.
Jahvino je to djelo: kakvo čudo u očima našim!
24 ೨೪ ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
Ovo je dan što ga učini Jahve: kličimo i radujmo se njemu!
25 ೨೫ ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.
O Jahve, spasenje nam daj! Jahve, sreću nam daj!
26 ೨೬ ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
Blagoslovljen koji dolazi u imenu Jahvinu! Blagoslivljamo vas iz Doma Jahvina!
27 ೨೭ ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
Obasjao nas Bog Jahve! Složite povorku s grančicama u ruci sve do rogova žrtvenika.
28 ೨೮ ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
Ti si Bog moj - tebi zahvaljujem: Bože moj, tebe ja uzvisujem.
29 ೨೯ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.
Zahvaljujte Jahvi jer je dobar, jer je vječna ljubav njegova!

< ಕೀರ್ತನೆಗಳು 118 >