< ಕೀರ್ತನೆಗಳು 118 >
1 ೧ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.
Halleluja! Brengt Jahweh dank, want Hij is goed: Zijn genade duurt eeuwig!
2 ೨ ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
Laat Israël herhalen: Zijn genade duurt eeuwig!
3 ೩ ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
Laat het huis van Aäron herhalen: Zijn genade duurt eeuwig!
4 ೪ ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
Die Jahweh vrezen, herhalen: Zijn genade duurt eeuwig!
5 ೫ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
In mijn benauwdheid riep ik tot Jahweh; En Jahweh heeft mij verhoord en verkwikt.
6 ೬ ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?
Voor mij neemt Jahweh het op: Niets heb ik te vrezen; Wat zouden de mensen mij doen!
7 ೭ ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
Voor mij neemt Jahweh het op: Hij komt mij te hulp; Zo zie ik op mijn vijanden neer!
8 ೮ ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
Beter tot Jahweh te vluchten, dan op mensen te bouwen;
9 ೯ ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
Beter tot Jahweh te vluchten, dan te bouwen op vorsten!
10 ೧೦ ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು.
Al houden mij alle volken omsingeld: In de Naam van Jahweh sla ik ze neer!
11 ೧೧ ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.
Al hebben ze mij van alle kanten omringd: In de Naam van Jahweh sla ik ze neer!
12 ೧೨ ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
Al zwermen ze als wespen om mij heen: In de Naam van Jahweh sla ik ze neer! Al laaien ze op als vuur in de doornen: In de Naam van Jahweh sla ik ze neer!
13 ೧೩ ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
Ik ben gestompt en geslagen, om te vallen, Maar Jahweh heeft mij gestut;
14 ೧೪ ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.
Jahweh is mijn kracht en mijn schuts, Hij heeft mij de zege verleend!
15 ೧೫ ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
Een jubel van blijdschap en zege Juicht onder de tenten der vromen: Jahweh’s rechterhand brengt de victorie;
16 ೧೬ ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
Jahweh’s rechter overwint!
17 ೧೭ ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.
Neen, ik zal niet sterven, maar leven, Om Jahweh’s daden te melden!
18 ೧೮ ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.
Wel heeft Jahweh mij streng gekastijd, Maar Hij gaf mij niet prijs aan de dood.
19 ೧೯ ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
Doet dan de poorten der gerechtigheid open: Ik wil er doorheen, om Jahweh te danken!
20 ೨೦ ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.
21 ೨೧ ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.
Ik wil U danken, want Gij hebt mij verhoord, Gij hebt mij de zege verleend!
22 ೨೨ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;
De steen, die de bouwlieden hadden verworpen, Is hoeksteen geworden;
23 ೨೩ ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.
Jahweh heeft het gedaan: Een wonder was het in onze ogen!
24 ೨೪ ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
Dit is de dag, die Jahweh gemaakt heeft: Laat ons thans jubelen en juichen!
25 ೨೫ ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.
Ach Jahweh, blijf ons toch helpen; Ach Jahweh, maak ons gelukkig!
26 ೨೬ ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
Gezegend, die komt in de Naam van Jahweh: 7 Uit Jahweh’s woning bidden wij zegen u toe!
27 ೨೭ ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
Jahweh is God: Hij doet ons stralen van vreugde; Bindt dan de feestslingers tot de hoornen van het altaar!
28 ೨೮ ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
Gij zijt mijn God: U wil ik loven; Gij zijt mijn God: U wil ik roemen!
29 ೨೯ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.
Brengt Jahweh dank, want Hij is goed: Zijn genade duurt eeuwig!