< ಕೀರ್ತನೆಗಳು 119 >

1 ಆಲೆಫ್. ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.
אַשְׁרֵ֥י תְמִֽימֵי־דָ֑רֶךְ הַֽ֝הֹלְכִ֗ים בְּתֹורַ֥ת יְהוָֽה׃
2 ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
אַ֭שְׁרֵי נֹצְרֵ֥י עֵדֹתָ֗יו בְּכָל־לֵ֥ב יִדְרְשֽׁוּהוּ׃
3 ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ.
אַ֭ף לֹֽא־פָעֲל֣וּ עַוְלָ֑ה בִּדְרָכָ֥יו הָלָֽכוּ׃
4 ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.
אַ֭תָּה צִוִּ֥יתָה פִקֻּדֶ֗יךָ לִשְׁמֹ֥ר מְאֹֽד׃
5 ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!
אַ֭חֲלַי יִכֹּ֥נוּ דְרָכָ֗י לִשְׁמֹ֥ר חֻקֶּֽיךָ׃
6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.
אָ֥ז לֹא־אֵבֹ֑ושׁ בְּ֝הַבִּיטִ֗י אֶל־כָּל־מִצְוֹתֶֽיךָ׃
7 ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.
אֹ֭ודְךָ בְּיֹ֣שֶׁר לֵבָ֑ב בְּ֝לָמְדִ֗י מִשְׁפְּטֵ֥י צִדְקֶֽךָ׃
8 ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು, ಸಂಪೂರ್ಣವಾಗಿ ಕೈಬಿಡಬೇಡ. ಬೇತ್.
אֶת־חֻקֶּ֥יךָ אֶשְׁמֹ֑ר אַֽל־תַּעַזְבֵ֥נִי עַד־מְאֹֽד׃
9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
בַּמֶּ֣ה יְזַכֶּה־נַּ֭עַר אֶת־אָרְחֹ֑ו לִ֝שְׁמֹ֗ר כִּדְבָרֶֽךָ׃
10 ೧೦ ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
בְּכָל־לִבִּ֥י דְרַשְׁתִּ֑יךָ אַל־תַּ֝שְׁגֵּ֗נִי מִמִּצְוֹתֶֽיךָ׃
11 ೧೧ ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
בְּ֭לִבִּי צָפַ֣נְתִּי אִמְרָתֶ֑ךָ לְ֝מַ֗עַן לֹ֣א אֶֽחֱטָא־לָֽךְ׃
12 ೧೨ ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
בָּר֖וּךְ אַתָּ֥ה יְהוָ֗ה לַמְּדֵ֥נִי חֻקֶּֽיךָ׃
13 ೧೩ ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.
בִּשְׂפָתַ֥י סִפַּ֑רְתִּי כֹּ֝֗ל מִשְׁפְּטֵי־פִֽיךָ׃
14 ೧೪ ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.
בְּדֶ֖רֶךְ עֵדְוֹתֶ֥יךָ שַׂ֗שְׂתִּי כְּעַ֣ל כָּל־הֹֽון׃
15 ೧೫ ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ, ನಿನ್ನ ದಾರಿಯನ್ನು ಲಕ್ಷಿಸುವೆನು.
בְּפִקֻּדֶ֥יךָ אָשִׂ֑יחָה וְ֝אַבִּ֗יטָה אֹרְחֹתֶֽיךָ׃
16 ೧೬ ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ. ಗಿಮೆಲ್.
בְּחֻקֹּתֶ֥יךָ אֶֽשְׁתַּעֲשָׁ֑ע לֹ֭א אֶשְׁכַּ֣ח דְּבָרֶֽךָ׃
17 ೧೭ ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು.
גְּמֹ֖ל עַֽל־עַבְדְּךָ֥ אֶֽחְיֶ֗ה וְאֶשְׁמְרָ֥ה דְבָרֶֽךָ׃
18 ೧೮ ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
גַּל־עֵינַ֥י וְאַבִּ֑יטָה נִ֝פְלָאֹ֗ות מִתֹּורָתֶֽךָ׃
19 ೧೯ ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.
גֵּ֣ר אָנֹכִ֣י בָאָ֑רֶץ אַל־תַּסְתֵּ֥ר מִ֝מֶּ֗נִּי מִצְוֹתֶֽיךָ׃
20 ೨೦ ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.
גָּרְסָ֣ה נַפְשִׁ֣י לְתַאֲבָ֑ה אֶֽל־מִשְׁפָּטֶ֥יךָ בְכָל־עֵֽת׃
21 ೨೧ ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.
גָּ֭עַרְתָּ זֵדִ֣ים אֲרוּרִ֑ים הַ֝שֹּׁגִים מִמִּצְוֹתֶֽיךָ׃
22 ೨೨ ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.
גַּ֣ל מֵֽ֭עָלַי חֶרְפָּ֣ה וָב֑וּז כִּ֖י עֵדֹתֶ֣יךָ נָצָֽרְתִּי׃
23 ೨೩ ಪ್ರಭುಗಳು ಕುಳಿತುಕೊಂಡು, ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.
גַּ֤ם יָֽשְׁב֣וּ שָׂ֭רִים בִּ֣י נִדְבָּ֑רוּ עַ֝בְדְּךָ֗ יָשִׂ֥יחַ בְּחֻקֶּֽיךָ׃
24 ೨೪ ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ. ದಾಲಿತ್.
גַּֽם־עֵ֭דֹתֶיךָ שַׁעֲשֻׁעָ֗י אַנְשֵׁ֥י עֲצָתִֽי׃
25 ೨೫ ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
דָּֽבְקָ֣ה לֶעָפָ֣ר נַפְשִׁ֑י חַ֝יֵּ֗נִי כִּדְבָרֶֽךָ׃
26 ೨೬ ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ, ನನಗೆ ಸದುತ್ತರವನ್ನು ದಯಪಾಲಿಸಿದಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
דְּרָכַ֣י סִ֭פַּרְתִּי וַֽתַּעֲנֵ֗נִי לַמְּדֵ֥נִי חֻקֶּֽיךָ׃
27 ೨೭ ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು.
דֶּֽרֶךְ־פִּקּוּדֶ֥יךָ הֲבִינֵ֑נִי וְ֝אָשִׂ֗יחָה בְּנִפְלְאֹותֶֽיךָ׃
28 ೨೮ ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.
דָּלְפָ֣ה נַ֭פְשִׁי מִתּוּגָ֑ה קַ֝יְּמֵ֗נִי כִּדְבָרֶֽךָ׃
29 ೨೯ ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.
דֶּֽרֶךְ־שֶׁ֭קֶר הָסֵ֣ר מִמֶּ֑נִּי וְֽתֹורָתְךָ֥ חָנֵּֽנִי׃
30 ೩೦ ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.
דֶּֽרֶךְ־אֱמוּנָ֥ה בָחָ֑רְתִּי מִשְׁפָּטֶ֥יךָ שִׁוִּֽיתִי׃
31 ೩೧ ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.
דָּבַ֥קְתִּי בְעֵֽדְוֹתֶ֑יךָ יְ֝הוָ֗ה אַל־תְּבִישֵֽׁנִי׃
32 ೩೨ ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.
דֶּֽרֶךְ־מִצְוֹתֶ֥יךָ אָר֑וּץ כִּ֖י תַרְחִ֣יב לִבִּֽי׃
33 ೩೩ ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.
הֹורֵ֣נִי יְ֭הוָה דֶּ֥רֶךְ חֻקֶּ֗יךָ וְאֶצְּרֶ֥נָּה עֵֽקֶב׃
34 ೩೪ ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
הֲ֭בִינֵנִי וְאֶצְּרָ֥ה תֹֽורָתֶ֗ךָ וְאֶשְׁמְרֶ֥נָּה בְכָל־לֵֽב׃
35 ೩೫ ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, ಅದೇ ನನ್ನ ಇಷ್ಟ.
הַ֭דְרִיכֵנִי בִּנְתִ֣יב מִצְוֹתֶ֑יךָ כִּי־בֹ֥ו חָפָֽצְתִּי׃
36 ೩೬ ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.
הַט־לִ֭בִּי אֶל־עֵדְוֹתֶ֗יךָ וְאַ֣ל אֶל־בָּֽצַע׃
37 ೩೭ ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.
הַעֲבֵ֣ר עֵ֭ינַי מֵרְאֹ֣ות שָׁ֑וְא בִּדְרָכֶ֥ךָ חַיֵּֽנִי׃
38 ೩೮ ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು, ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.
הָקֵ֣ם לְ֭עַבְדְּךָ אִמְרָתֶ֑ךָ אֲ֝שֶׁ֗ר לְיִרְאָתֶֽךָ׃
39 ೩೯ ನನ್ನ ಅವಮಾನವನ್ನು ತೊಲಗಿಸು, ಅದಕ್ಕೋಸ್ಕರ ಅಂಜುತ್ತಿದ್ದೇನೆ. ನಿನ್ನ ಕಟ್ಟಳೆಗಳು ಹಿತಕರವಾಗಿವೆ.
הַעֲבֵ֣ר חֶ֭רְפָּתִי אֲשֶׁ֣ר יָגֹ֑רְתִּי כִּ֖י מִשְׁפָּטֶ֣יךָ טֹובִֽים׃
40 ೪೦ ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್.
הִ֭נֵּה תָּאַ֣בְתִּי לְפִקֻּדֶ֑יךָ בְּצִדְקָתְךָ֥ חַיֵּֽנִי׃
41 ೪೧ ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.
וִֽיבֹאֻ֣נִי חֲסָדֶ֣ךָ יְהוָ֑ה תְּ֝שֽׁוּעָתְךָ֗ כְּאִמְרָתֶֽךָ׃
42 ೪೨ ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.
וְאֶֽעֱנֶ֣ה חֹרְפִ֣י דָבָ֑ר כִּֽי־בָ֝טַחְתִּי בִּדְבָרֶֽךָ׃
43 ೪೩ ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
וְֽאַל־תַּצֵּ֬ל מִפִּ֣י דְבַר־אֱמֶ֣ת עַד־מְאֹ֑ד כִּ֖י לְמִשְׁפָּטֶ֣ךָ יִחָֽלְתִּי׃
44 ೪೪ ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
וְאֶשְׁמְרָ֖ה תֹורָתְךָ֥ תָמִ֗יד לְעֹולָ֥ם וָעֶֽד׃
45 ೪೫ ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.
וְאֶתְהַלְּכָ֥ה בָרְחָבָ֑ה כִּ֖י פִקֻּדֶ֣יךָ דָרָֽשְׁתִּי׃
46 ೪೬ ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.
וַאֲדַבְּרָ֣ה בְ֭עֵדֹתֶיךָ נֶ֥גֶד מְלָכִ֗ים וְלֹ֣א אֵבֹֽושׁ׃
47 ೪೭ ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.
וְאֶשְׁתַּֽעֲשַׁ֥ע בְּמִצְוֹתֶ֗יךָ אֲשֶׁ֣ר אָהָֽבְתִּי׃
48 ೪೮ ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, ಅವುಗಳನ್ನು ನಾನು ಪ್ರೀತಿಸುತ್ತೇನೆ, ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ. ಸಾಯಿನ್.
וְאֶשָּֽׂא־כַפַּ֗י אֶֽל־מִ֭צְוֹתֶיךָ אֲשֶׁ֥ר אָהָ֗בְתִּי וְאָשִׂ֥יחָה בְחֻקֶּֽיךָ׃
49 ೪೯ ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!
זְכֹר־דָּבָ֥ר לְעַבְדֶּ֑ךָ עַ֝֗ל אֲשֶׁ֣ר יִֽחַלְתָּֽנִי׃
50 ೫೦ ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
זֹ֣את נֶחָמָתִ֣י בְעָנְיִ֑י כִּ֖י אִמְרָתְךָ֣ חִיָּֽתְנִי׃
51 ೫೧ ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.
זֵ֭דִים הֱלִיצֻ֣נִי עַד־מְאֹ֑ד מִ֝תֹּֽורָתְךָ֗ לֹ֣א נָטִֽיתִי׃
52 ೫೨ ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು, ನನ್ನನ್ನು ಸಂತೈಸಿಕೊಂಡಿದ್ದೇನೆ.
זָ֘כַ֤רְתִּי מִשְׁפָּטֶ֖יךָ מֵעֹולָ֥ם ׀ יְהוָ֗ה וָֽאֶתְנֶחָֽם׃
53 ೫೩ ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.
זַלְעָפָ֣ה אֲ֭חָזַתְנִי מֵרְשָׁעִ֑ים עֹ֝זְבֵ֗י תֹּורָתֶֽךָ׃
54 ೫೪ ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು.
זְ֭מִרֹות הָֽיוּ־לִ֥י חֻקֶּ֗יךָ בְּבֵ֣ית מְגוּרָֽי׃
55 ೫೫ ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ.
זָ֘כַ֤רְתִּי בַלַּ֣יְלָה שִׁמְךָ֣ יְהוָ֑ה וָֽ֝אֶשְׁמְרָ֗ה תֹּורָתֶֽךָ׃
56 ೫೬ ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು. ಹೇತ್.
זֹ֥את הָֽיְתָה־לִּ֑י כִּ֖י פִקֻּדֶ֣יךָ נָצָֽרְתִּי׃
57 ೫೭ ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.
חֶלְקִ֖י יְהוָ֥ה אָמַ֗רְתִּי לִשְׁמֹ֥ר דְּבָרֶֽיךָ׃
58 ೫೮ ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.
חִלִּ֣יתִי פָנֶ֣יךָ בְכָל־לֵ֑ב חָ֝נֵּ֗נִי כְּאִמְרָתֶֽךָ׃
59 ೫೯ ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
חִשַּׁ֥בְתִּי דְרָכָ֑י וָאָשִׁ֥יבָה רַ֝גְלַ֗י אֶל־עֵדֹתֶֽיךָ׃
60 ೬೦ ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.
חַ֭שְׁתִּי וְלֹ֣א הִתְמַהְמָ֑הְתִּי לִ֝שְׁמֹ֗ר מִצְוֹתֶֽיךָ׃
61 ೬೧ ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.
חֶבְלֵ֣י רְשָׁעִ֣ים עִוְּדֻ֑נִי תֹּֽ֝ורָתְךָ֗ לֹ֣א שָׁכָֽחְתִּי׃
62 ೬೨ ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.
חֲצֹֽות־לַ֗יְלָה אָ֭קוּם לְהֹודֹ֣ות לָ֑ךְ עַ֝֗ל מִשְׁפְּטֵ֥י צִדְקֶֽךָ׃
63 ೬೩ ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.
חָבֵ֣ר אָ֭נִי לְכָל־אֲשֶׁ֣ר יְרֵא֑וּךָ וּ֝לְשֹׁמְרֵ֗י פִּקּוּדֶֽיךָ׃
64 ೬೪ ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ, ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು. ಟೇತ್.
חַסְדְּךָ֣ יְ֭הוָה מָלְאָ֥ה הָאָ֗רֶץ חֻקֶּ֥יךָ לַמְּדֵֽנִי׃
65 ೬೫ ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ, ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ.
טֹ֭וב עָשִׂ֣יתָ עִֽם־עַבְדְּךָ֑ יְ֝הוָ֗ה כִּדְבָרֶֽךָ׃
66 ೬೬ ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.
ט֤וּב טַ֣עַם וָדַ֣עַת לַמְּדֵ֑נִי כִּ֖י בְמִצְוֹתֶ֣יךָ הֶאֱמָֽנְתִּי׃
67 ೬೭ ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.
טֶ֣רֶם אֶ֭עֱנֶה אֲנִ֣י שֹׁגֵ֑ג וְ֝עַתָּ֗ה אִמְרָתְךָ֥ שָׁמָֽרְתִּי׃
68 ೬೮ ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.
טֹוב־אַתָּ֥ה וּמֵטִ֗יב לַמְּדֵ֥נִי חֻקֶּֽיךָ׃
69 ೬೯ ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
טָפְל֬וּ עָלַ֣י שֶׁ֣קֶר זֵדִ֑ים אֲ֝נִ֗י בְּכָל־לֵ֤ב ׀ אֱצֹּ֬ר פִּקּוּדֶֽיךָ׃
70 ೭೦ ಅವರ ಹೃದಯದಲ್ಲಿ ಸತ್ಯವಿಲ್ಲ, ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ.
טָפַ֣שׁ כַּחֵ֣לֶב לִבָּ֑ם אֲ֝נִ֗י תֹּורָתְךָ֥ שִֽׁעֲשָֽׁעְתִּי׃
71 ೭೧ ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.
טֹֽוב־לִ֥י כִֽי־עֻנֵּ֑יתִי לְ֝מַ֗עַן אֶלְמַ֥ד חֻקֶּֽיךָ׃
72 ೭೨ ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.
טֹֽוב־לִ֥י תֹֽורַת־פִּ֑יךָ מֵ֝אַלְפֵ֗י זָהָ֥ב וָכָֽסֶף׃
73 ೭೩ ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.
יָדֶ֣יךָ עָ֭שׂוּנִי וַֽיְכֹונְנ֑וּנִי הֲ֝בִינֵ֗נִי וְאֶלְמְדָ֥ה מִצְוֹתֶֽיךָ׃
74 ೭೪ ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.
יְ֭רֵאֶיךָ יִרְא֣וּנִי וְיִשְׂמָ֑חוּ כִּ֖י לִדְבָרְךָ֣ יִחָֽלְתִּי׃
75 ೭೫ ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.
יָדַ֣עְתִּי יְ֭הוָה כִּי־צֶ֣דֶק מִשְׁפָּטֶ֑יךָ וֶ֝אֱמוּנָ֗ה עִנִּיתָֽנִי׃
76 ೭೬ ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.
יְהִי־נָ֣א חַסְדְּךָ֣ לְנַחֲמֵ֑נִי כְּאִמְרָתְךָ֥ לְעַבְדֶּֽךָ׃
77 ೭೭ ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.
יְבֹא֣וּנִי רַחֲמֶ֣יךָ וְאֶֽחְיֶ֑ה כִּי־תֹֽ֝ורָתְךָ֗ שַֽׁעֲשֻׁעָֽי׃
78 ೭೮ ಗರ್ವಿಷ್ಠರು ಮಾನಭಂಗ ಹೊಂದಲಿ, ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.
יֵבֹ֣שׁוּ זֵ֭דִים כִּי־שֶׁ֣קֶר עִוְּת֑וּנִי אֲ֝נִ֗י אָשִׂ֥יחַ בְּפִקּוּדֶֽיךָ׃
79 ೭೯ ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು, ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ.
יָשׁ֣וּבוּ לִ֣י יְרֵאֶ֑יךָ וְיָדְעוּ (וְ֝יֹדְעֵ֗י) עֵדֹתֶֽיךָ׃
80 ೮೦ ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.
יְהִֽי־לִבִּ֣י תָמִ֣ים בְּחֻקֶּ֑יךָ לְ֝מַ֗עַן לֹ֣א אֵבֹֽושׁ׃
81 ೮೧ ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.
כָּלְתָ֣ה לִתְשׁוּעָתְךָ֣ נַפְשִׁ֑י לִדְבָרְךָ֥ יִחָֽלְתִּי׃
82 ೮೨ ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ? ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು.
כָּל֣וּ עֵ֭ינַי לְאִמְרָתֶ֑ךָ לֵ֝אמֹ֗ר מָתַ֥י תְּֽנַחֲמֵֽנִי׃
83 ೮೩ ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.
כִּֽי־הָ֭יִיתִי כְּנֹ֣אד בְּקִיטֹ֑ור חֻ֝קֶּ֗יךָ לֹ֣א שָׁכָֽחְתִּי׃
84 ೮೪ ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ?
כַּמָּ֥ה יְמֵֽי־עַבְדֶּ֑ךָ מָתַ֬י תַּעֲשֶׂ֖ה בְרֹדְפַ֣י מִשְׁפָּֽט׃
85 ೮೫ ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.
כָּֽרוּ־לִ֣י זֵדִ֣ים שִׁיחֹ֑ות אֲ֝שֶׁ֗ר לֹ֣א כְתֹורָתֶֽךָ׃
86 ೮೬ ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.
כָּל־מִצְוֹתֶ֥יךָ אֱמוּנָ֑ה שֶׁ֖קֶר רְדָפ֣וּנִי עָזְרֵֽנִי׃
87 ೮೭ ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.
כִּ֭מְעַט כִּלּ֣וּנִי בָאָ֑רֶץ וַ֝אֲנִ֗י לֹא־עָזַ֥בְתִּי פִקֻּודֶֽיךָ׃
88 ೮೮ ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್.
כְּחַסְדְּךָ֥ חַיֵּ֑נִי וְ֝אֶשְׁמְרָ֗ה עֵד֥וּת פִּֽיךָ׃
89 ೮೯ ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
לְעֹולָ֥ם יְהוָ֑ה דְּ֝בָרְךָ֗ נִצָּ֥ב בַּשָּׁמָֽיִם׃
90 ೯೦ ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.
לְדֹ֣ר וָ֭דֹר אֱמֽוּנָתֶ֑ךָ כֹּונַ֥נְתָּ אֶ֝֗רֶץ וַֽתַּעֲמֹֽד׃
91 ೯೧ ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.
לְֽ֭מִשְׁפָּטֶיךָ עָמְד֣וּ הַיֹּ֑ום כִּ֖י הַכֹּ֣ל עֲבָדֶֽיךָ׃
92 ೯೨ ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.
לוּלֵ֣י תֹ֭ורָתְךָ שַׁעֲשֻׁעָ֑י אָ֝֗ז אָבַ֥דְתִּי בְעָנְיִֽי׃
93 ೯೩ ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
לְ֭עֹולָם לֹא־אֶשְׁכַּ֣ח פִּקּוּדֶ֑יךָ כִּ֥י בָ֝֗ם חִיִּיתָֽנִי׃
94 ೯೪ ನಾನು ನಿನ್ನವನು, ರಕ್ಷಿಸು, ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.
לְֽךָ־אֲ֭נִי הֹושִׁיעֵ֑נִי כִּ֖י פִקּוּדֶ֣יךָ דָרָֽשְׁתִּי׃
95 ೯೫ ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
לִ֤י קִוּ֣וּ רְשָׁעִ֣ים לְאַבְּדֵ֑נִי עֵ֝דֹתֶ֗יךָ אֶתְבֹּונָֽן׃
96 ೯೬ ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. ಮೆಮ್.
לְֽכָל תִּ֭כְלָה רָאִ֣יתִי קֵ֑ץ רְחָבָ֖ה מִצְוָתְךָ֣ מְאֹֽד׃
97 ೯೭ ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.
מָֽה־אָהַ֥בְתִּי תֹורָתֶ֑ךָ כָּל־הַ֝יֹּ֗ום הִ֣יא שִׂיחָתִֽי׃
98 ೯೮ ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ.
מֵ֭אֹ֣יְבַי תְּחַכְּמֵ֣נִי מִצְוֹתֶ֑ךָ כִּ֖י לְעֹולָ֣ם הִיא־לִֽי׃
99 ೯೯ ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
מִכָּל־מְלַמְּדַ֥י הִשְׂכַּ֑לְתִּי כִּ֥י עֵ֝דְוֹתֶ֗יךָ שִׂ֣יחָה לִֽֿי׃
100 ೧೦೦ ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ, ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.
מִזְּקֵנִ֥ים אֶתְבֹּונָ֑ן כִּ֖י פִקּוּדֶ֣יךָ נָצָֽרְתִּי׃
101 ೧೦೧ ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.
מִכָּל־אֹ֣רַח רָ֭ע כָּלִ֣אתִי רַגְלָ֑י לְ֝מַ֗עַן אֶשְׁמֹ֥ר דְּבָרֶֽךָ׃
102 ೧೦೨ ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.
מִמִּשְׁפָּטֶ֥יךָ לֹא־סָ֑רְתִּי כִּֽי־אַ֝תָּ֗ה הֹורֵתָֽנִי׃
103 ೧೦೩ ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.
מַה־נִּמְלְצ֣וּ לְ֭חִכִּי אִמְרָתֶ֗ךָ מִדְּבַ֥שׁ לְפִֽי׃
104 ೧೦೪ ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್.
מִפִּקּוּדֶ֥יךָ אֶתְבֹּונָ֑ן עַל־כֵּ֝֗ן שָׂנֵ֤אתִי ׀ כָּל־אֹ֬רַח שָֽׁקֶר׃
105 ೧೦೫ ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.
נֵר־לְרַגְלִ֥י דְבָרֶ֑ךָ וְ֝אֹ֗ור לִנְתִיבָתִֽי׃
106 ೧೦೬ ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
נִשְׁבַּ֥עְתִּי וָאֲקַיֵּ֑מָה לִ֝שְׁמֹ֗ר מִשְׁפְּטֵ֥י צִדְקֶֽךָ׃
107 ೧೦೭ ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
נַעֲנֵ֥יתִי עַד־מְאֹ֑ד יְ֝הוָ֗ה חַיֵּ֥נִי כִדְבָרֶֽךָ׃
108 ೧೦೮ ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.
נִדְבֹ֣ות פִּ֭י רְצֵה־נָ֣א יְהוָ֑ה וּֽמִשְׁפָּטֶ֥יךָ לַמְּדֵֽנִי׃
109 ೧೦೯ ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.
נַפְשִׁ֣י בְכַפִּ֣י תָמִ֑יד וְ֝תֹֽורָתְךָ֗ לֹ֣א שָׁכָֽחְתִּי׃
110 ೧೧೦ ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.
נָתְנ֬וּ רְשָׁעִ֣ים פַּ֣ח לִ֑י וּ֝מִפִּקּוּדֶ֗יךָ לֹ֣א תָעִֽיתִי׃
111 ೧೧೧ ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
נָחַ֣לְתִּי עֵדְוֹתֶ֣יךָ לְעֹולָ֑ם כִּֽי־שְׂשֹׂ֖ון לִבִּ֣י הֵֽמָּה׃
112 ೧೧೨ ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. ಸಾಮೆಕ್.
נָטִ֣יתִי לִ֭בִּי לַעֲשֹׂ֥ות חֻקֶּ֗יךָ לְעֹולָ֥ם עֵֽקֶב׃
113 ೧೧೩ ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.
סֵעֲפִ֥ים שָׂנֵ֑אתִי וְֽתֹורָתְךָ֥ אָהָֽבְתִּי׃
114 ೧೧೪ ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.
סִתְרִ֣י וּמָגִנִּ֣י אָ֑תָּה לִדְבָרְךָ֥ יִחָֽלְתִּי׃
115 ೧೧೫ ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
סֽוּרוּ־מִמֶּ֥נִּי מְרֵעִ֑ים וְ֝אֶצְּרָ֗ה מִצְוֹ֥ת אֱלֹהָֽי׃
116 ೧೧೬ ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.
סָמְכֵ֣נִי כְאִמְרָתְךָ֣ וְאֶֽחְיֶ֑ה וְאַל־תְּ֝בִישֵׁ֗נִי מִשִּׂבְרִֽי׃
117 ೧೧೭ ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.
סְעָדֵ֥נִי וְאִוָּשֵׁ֑עָה וְאֶשְׁעָ֖ה בְחֻקֶּ֣יךָ תָמִֽיד׃
118 ೧೧೮ ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.
סָ֭לִיתָ כָּל־שֹׁוגִ֣ים מֵחֻקֶּ֑יךָ כִּי־שֶׁ֝֗קֶר תַּרְמִיתָֽם׃
119 ೧೧೯ ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
סִגִ֗ים הִשְׁבַּ֥תָּ כָל־רִשְׁעֵי־אָ֑רֶץ לָ֝כֵ֗ן אָהַ֥בְתִּי עֵדֹתֶֽיךָ׃
120 ೧೨೦ ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.
סָמַ֣ר מִפַּחְדְּךָ֣ בְשָׂרִ֑י וּֽמִמִּשְׁפָּטֶ֥יךָ יָרֵֽאתִי׃
121 ೧೨೧ ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.
עָ֭שִׂיתִי מִשְׁפָּ֣ט וָצֶ֑דֶק בַּל־תַּ֝נִּיחֵ֗נִי לְעֹֽשְׁקָֽי׃
122 ೧೨೨ ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
עֲרֹ֣ב עַבְדְּךָ֣ לְטֹ֑וב אַֽל־יַעַשְׁקֻ֥נִי זֵדִֽים׃
123 ೧೨೩ ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು.
עֵ֭ינַי כָּל֣וּ לִֽישׁוּעָתֶ֑ךָ וּלְאִמְרַ֥ת צִדְקֶֽךָ׃
124 ೧೨೪ ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
עֲשֵׂ֖ה עִם־עַבְדְּךָ֥ כְחַסְדֶּ֗ךָ וְחֻקֶּ֥יךָ לַמְּדֵֽנִי׃
125 ೧೨೫ ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.
עַבְדְּךָ־אָ֥נִי הֲבִינֵ֑נִי וְ֝אֵדְעָ֗ה עֵדֹתֶֽיךָ׃
126 ೧೨೬ ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
עֵ֭ת לַעֲשֹׂ֣ות לַיהוָ֑ה הֵ֝פֵ֗רוּ תֹּורָתֶֽךָ׃
127 ೧೨೭ ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.
עַל־כֵּ֭ן אָהַ֣בְתִּי מִצְוֹתֶ֑יךָ מִזָּהָ֥ב וּמִפָּֽז׃
128 ೧೨೮ ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.
עַל־כֵּ֤ן ׀ כָּל־פִּקּ֣וּדֵי כֹ֣ל יִשָּׁ֑רְתִּי כָּל־אֹ֖רַח שֶׁ֣קֶר שָׂנֵֽאתִי׃
129 ೧೨೯ ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.
פְּלָאֹ֥ות עֵדְוֹתֶ֑יךָ עַל־כֵּ֝֗ן נְצָרָ֥תַם נַפְשִֽׁי׃
130 ೧೩೦ ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
פֵּ֖תַח דְּבָרֶ֥יךָ יָאִ֗יר מֵבִ֥ין פְּתָיִֽים׃
131 ೧೩೧ ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.
פִּֽי־פָ֭עַרְתִּי וָאֶשְׁאָ֑פָה כִּ֖י לְמִצְוֹתֶ֣יךָ יָאָֽבְתִּי׃
132 ೧೩೨ ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?
פְּנֵה־אֵלַ֥י וְחָנֵּ֑נִי כְּ֝מִשְׁפָּ֗ט לְאֹהֲבֵ֥י שְׁמֶֽךָ׃
133 ೧೩೩ ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
פְּ֭עָמַי הָכֵ֣ן בְּאִמְרָתֶ֑ךָ וְֽאַל־תַּשְׁלֶט־בִּ֥י כָל־אָֽוֶן׃
134 ೧೩೪ ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.
פְּ֭דֵנִי מֵעֹ֣שֶׁק אָדָ֑ם וְ֝אֶשְׁמְרָ֗ה פִּקּוּדֶֽיךָ׃
135 ೧೩೫ ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
פָּ֭נֶיךָ הָאֵ֣ר בְּעַבְדֶּ֑ךָ וְ֝לַמְּדֵ֗נִי אֶת־חֻקֶּֽיךָ׃
136 ೧೩೬ ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.
פַּלְגֵי־מַ֭יִם יָרְד֣וּ עֵינָ֑י עַ֝֗ל לֹא־שָׁמְר֥וּ תֹורָתֶֽךָ׃
137 ೧೩೭ ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.
צַדִּ֣יק אַתָּ֣ה יְהוָ֑ה וְ֝יָשָׁ֗ר מִשְׁפָּטֶֽיךָ׃
138 ೧೩೮ ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ,
צִ֭וִּיתָ צֶ֣דֶק עֵדֹתֶ֑יךָ וֶֽאֱמוּנָ֥ה מְאֹֽד׃
139 ೧೩೯ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,
צִמְּתַ֥תְנִי קִנְאָתִ֑י כִּֽי־שָׁכְח֖וּ דְבָרֶ֣יךָ צָרָֽי׃
140 ೧೪೦ ನಿನ್ನ ನುಡಿಯು ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.
צְרוּפָ֖ה אִמְרָתְךָ֥ מְאֹ֗ד וְֽעַבְדְּךָ֥ אֲהֵבָֽהּ׃
141 ೧೪೧ ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
צָעִ֣יר אָנֹכִ֣י וְנִבְזֶ֑ה פִּ֝קֻּדֶ֗יךָ לֹ֣א שָׁכָֽחְתִּי׃
142 ೧೪೨ ನಿನ್ನ ನೀತಿಯು ನಿತ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.
צִדְקָתְךָ֣ צֶ֣דֶק לְעֹולָ֑ם וְֽתֹורָתְךָ֥ אֱמֶֽת׃
143 ೧೪೩ ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ, ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.
צַר־וּמָצֹ֥וק מְצָא֑וּנִי מִ֝צְוֹתֶ֗יךָ שַׁעֲשֻׁעָֽי׃
144 ೧೪೪ ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. ಖೋಫ್.
צֶ֖דֶק עֵדְוֹתֶ֥יךָ לְעֹולָ֗ם הֲבִינֵ֥נִי וְאֶחְיֶֽה׃
145 ೧೪೫ ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.
קָרָ֣אתִי בְכָל־לֵ֭ב עֲנֵ֥נִי יְהוָ֗ה חֻקֶּ֥יךָ אֶצֹּֽרָה׃
146 ೧೪೬ ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು.
קְרָאתִ֥יךָ הֹושִׁיעֵ֑נִי וְ֝אֶשְׁמְרָ֗ה עֵדֹתֶֽיךָ׃
147 ೧೪೭ ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು, ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.
קִדַּ֣מְתִּי בַ֭נֶּשֶׁף וָאֲשַׁוֵּ֑עָה לִדְבָרֶיךָ (לִדְבָרְךָ֥) יִחָֽלְתִּי׃
148 ೧೪೮ ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.
קִדְּמ֣וּ עֵ֭ינַי אַשְׁמֻרֹ֑ות לָ֝שִׂ֗יחַ בְּאִמְרָתֶֽךָ׃
149 ೧೪೯ ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
קֹ֭ולִי שִׁמְעָ֣ה כְחַסְדֶּ֑ךָ יְ֝הוָ֗ה כְּֽמִשְׁפָּטֶ֥ךָ חַיֵּֽנִי׃
150 ೧೫೦ ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ.
קָ֭רְבוּ רֹדְפֵ֣י זִמָּ֑ה מִתֹּורָתְךָ֥ רָחָֽקוּ׃
151 ೧೫೧ ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ, ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.
קָרֹ֣וב אַתָּ֣ה יְהוָ֑ה וְֽכָל־מִצְוֹתֶ֥יךָ אֱמֶֽת׃
152 ೧೫೨ ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ರೇಷ್.
קֶ֣דֶם יָ֭דַעְתִּי מֵעֵדֹתֶ֑יךָ כִּ֖י לְעֹולָ֣ם יְסַדְתָּֽם׃
153 ೧೫೩ ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.
רְאֵֽה־עָנְיִ֥י וְחַלְּצֵ֑נִי כִּי־תֹֽ֝ורָתְךָ֗ לֹ֣א שָׁכָֽחְתִּי׃
154 ೧೫೪ ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
רִיבָ֣ה רִ֭יבִי וּגְאָלֵ֑נִי לְאִמְרָתְךָ֥ חַיֵּֽנִי׃
155 ೧೫೫ ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
רָחֹ֣וק מֵרְשָׁעִ֣ים יְשׁוּעָ֑ה כִּֽי־חֻ֝קֶּיךָ לֹ֣א דָרָֽשׁוּ׃
156 ೧೫೬ ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.
רַחֲמֶ֖יךָ רַבִּ֥ים ׀ יְהוָ֑ה כְּֽמִשְׁפָּטֶ֥יךָ חַיֵּֽנִי׃
157 ೧೫೭ ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.
רַ֭בִּים רֹדְפַ֣י וְצָרָ֑י מֵ֝עֵדְוֹתֶ֗יךָ לֹ֣א נָטִֽיתִי׃
158 ೧೫೮ ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.
רָאִ֣יתִי בֹ֭גְדִים וָֽאֶתְקֹוטָ֑טָה אֲשֶׁ֥ר אִ֝מְרָתְךָ֗ לֹ֣א שָׁמָֽרוּ׃
159 ೧೫೯ ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
רְ֭אֵה כִּי־פִקּוּדֶ֣יךָ אָהָ֑בְתִּי יְ֝הוָ֗ה כְּֽחַסְדְּךָ֥ חַיֵּֽנִי׃
160 ೧೬೦ ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. ಷಿನ್.
רֹאשׁ־דְּבָרְךָ֥ אֱמֶ֑ת וּ֝לְעֹולָ֗ם כָּל־מִשְׁפַּ֥ט צִדְקֶֽךָ׃
161 ೧೬೧ ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.
שָׂ֭רִים רְדָפ֣וּנִי חִנָּ֑ם וּמִדְּבָרֶיךָ (וּ֝מִדְּבָרְךָ֗) פָּחַ֥ד לִבִּֽי׃
162 ೧೬೨ ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.
שָׂ֣שׂ אָ֭נֹכִֽי עַל־אִמְרָתֶ֑ךָ כְּ֝מֹוצֵ֗א שָׁלָ֥ל רָֽב׃
163 ೧೬೩ ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
שֶׁ֣קֶר שָׂ֭נֵאתִי וַאֲתַעֵ֑בָה תֹּורָתְךָ֥ אָהָֽבְתִּי׃
164 ೧೬೪ ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.
שֶׁ֣בַע בַּ֭יֹּום הִלַּלְתִּ֑יךָ עַ֝֗ל מִשְׁפְּטֵ֥י צִדְקֶֽךָ׃
165 ೧೬೫ ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
שָׁלֹ֣ום רָ֭ב לְאֹהֲבֵ֣י תֹורָתֶ֑ךָ וְאֵֽין־לָ֥מֹו מִכְשֹֽׁול׃
166 ೧೬೬ ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, ನಿರೀಕ್ಷಿಸುತ್ತಾ ಇದ್ದೇನೆ, ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.
שִׂבַּ֣רְתִּי לִֽישׁוּעָתְךָ֣ יְהוָ֑ה וּֽמִצְוֹתֶ֥יךָ עָשִֽׂיתִי׃
167 ೧೬೭ ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ.
שָֽׁמְרָ֣ה נַ֭פְשִׁי עֵדֹתֶ֑יךָ וָאֹהֲבֵ֥ם מְאֹֽד׃
168 ೧೬೮ ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. ತಾವ್.
שָׁמַ֣רְתִּי פִ֭קּוּדֶיךָ וְעֵדֹתֶ֑יךָ כִּ֖י כָל־דְּרָכַ֣י נֶגְדֶּֽךָ׃
169 ೧೬೯ ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
תִּקְרַ֤ב רִנָּתִ֣י לְפָנֶ֣יךָ יְהוָ֑ה כִּדְבָרְךָ֥ הֲבִינֵֽנִי׃
170 ೧೭೦ ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
תָּבֹ֣וא תְּחִנָּתִ֣י לְפָנֶ֑יךָ כְּ֝אִמְרָתְךָ֗ הַצִּילֵֽנִי׃
171 ೧೭೧ ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
תַּבַּ֣עְנָה שְׂפָתַ֣י תְּהִלָּ֑ה כִּ֖י תְלַמְּדֵ֣נִי חֻקֶּֽיךָ׃
172 ೧೭೨ ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.
תַּ֣עַן לְ֭שֹׁונִי אִמְרָתֶ֑ךָ כִּ֖י כָל־מִצְוֹתֶ֣יךָ צֶּֽדֶק׃
173 ೧೭೩ ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ, ನಿನ್ನ ಕೈ ನನಗೆ ನೆರವಾಗಲಿ.
תְּהִֽי־יָדְךָ֥ לְעָזְרֵ֑נִי כִּ֖י פִקּוּדֶ֣יךָ בָחָֽרְתִּי׃
174 ೧೭೪ ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.
תָּאַ֣בְתִּי לִֽישׁוּעָתְךָ֣ יְהוָ֑ה וְ֝תֹֽורָתְךָ֗ שַׁעֲשֻׁעָֽי׃
175 ೧೭೫ ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.
תְּֽחִי־נַ֭פְשִׁי וּֽתְהַֽלְלֶ֑ךָּ וּֽמִשְׁפָּטֶ֥ךָ יַעֲזְרֻֽנִי׃
176 ೧೭೬ ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.
תָּעִ֗יתִי כְּשֶׂ֣ה אֹ֭בֵד בַּקֵּ֣שׁ עַבְדֶּ֑ךָ כִּ֥י מִ֝צְוֹתֶ֗יךָ לֹ֣א שָׁכָֽחְתִּי׃

< ಕೀರ್ತನೆಗಳು 119 >