< ಕೀರ್ತನೆಗಳು 119 >

1 ಆಲೆಫ್. ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.
행위 완전하여 여호와의 법에 행하는 자가 복이 있음이여
2 ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
여호와의 증거를 지키고 전심으로 여호와를 구하는 자가 복이 있도다
3 ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ.
실로 저희는 불의를 행치 아니하고 주의 도를 행하는도다
4 ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.
주께서 주의 법도로 명하사 우리로 근실히 지키게 하셨나이다
5 ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!
내 길을 굳이 정하사 주의 율례를 지키게 하소서
6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.
내가 주의 모든 계명에 주의할 때에는 부끄럽지 아니하리이다
7 ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.
내가 주의 의로운 판단을 배울 때에는 정직한 마음으로 주께 감사하리이다
8 ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು, ಸಂಪೂರ್ಣವಾಗಿ ಕೈಬಿಡಬೇಡ.
내가 주의 율례를 지키오리니 나를 아주 버리지 마옵소서
9 ಬೇತ್. ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
청년이 무엇으로 그 행실을 깨끗케 하리이까? 주의 말씀을 따라 삼갈 것이니이다
10 ೧೦ ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
내가 전심으로 주를 찾았사오니 주의 계명에서 떠나지 말게 하소서
11 ೧೧ ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
주께서 나를 가르치셨으므로 내가 주의 규례에서 떠나지 아니하였나이다
12 ೧೨ ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
주의 말씀의 맛이 내게 어찌 그리 단지요 내 입에 꿀보다 더하니이다
13 ೧೩ ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.
주의 말씀은 내 발에 등이요 내 길에 빛이니이다
14 ೧೪ ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.
나의 고난이 막심하오니 여호와여, 주의 말씀대로 나를 소성케 하소서
15 ೧೫ ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ, ನಿನ್ನ ದಾರಿಯನ್ನು ಲಕ್ಷಿಸುವೆನು.
나의 생명이 항상 위경에 있사오나 주의 법은 잊지 아니하나이다
16 ೧೬ ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ.
내가 주의 말씀을 지키려고 발을 금하여 모든 악한 길로 가지 아니하였사오며
17 ೧೭ ಗಿಮೆಲ್. ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು.
주의 의로운 규례를 지키기로 맹세하고 굳게 정하였나이다
18 ೧೮ ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
주의 법도로 인하여 내가 명철케 되었으므로 모든 거짓 행위를 미워하나이다
19 ೧೯ ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.
주의 법도를 지키므로 나의 명철함이 노인보다 승하니이다
20 ೨೦ ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.
여호와여, 구하오니 내 입의 낙헌제를 받으시고 주의 규례로 나를 가르치소서
21 ೨೧ ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.
주께서 세상의 모든 악인을 찌끼 같이 버리시니 그러므로 내가 주의 증거를 사랑하나이다
22 ೨೨ ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.
주의 증거로 내가 영원히 기업을 삼았사오니 이는 내 마음의 즐거움이 됨이니이다
23 ೨೩ ಪ್ರಭುಗಳು ಕುಳಿತುಕೊಂಡು, ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.
내가 주께 범죄치 아니하려 하여 주의 말씀을 내 마음에 두었나이다
24 ೨೪ ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ.
내가 두 마음 품는 자를 미워하고 주의 법을 사랑하나이다
25 ೨೫ ದಾಲಿತ್. ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
악인이 나를 해하려고 올무를 놓았사오나 나는 주의 법도에서 떠나지 아니하였나이다
26 ೨೬ ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ, ನನಗೆ ಸದುತ್ತರವನ್ನು ದಯಪಾಲಿಸಿದಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
너희 행악자여 나를 떠날지어다 나는 내 하나님의 계명을 지키리로다
27 ೨೭ ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು.
주의 말씀대로 나를 붙들어 살게 하시고 내 소망이 부끄럽지 말게 하소서
28 ೨೮ ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.
주의 율례에서 떠나는 자는 주께서 다 멸시하셨으니 저희 궤사는 허무함이니이다
29 ೨೯ ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.
나를 붙드소서 그리하시면 내가 구원을 얻고 주의 율례에 항상 주의하리이다
30 ೩೦ ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.
내가 주의 율례를 길이 끝까지 행하려고 내 마음을 기울였나이다
31 ೩೧ ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.
주는 나의 은신처요 방패시라 내가 주의 말씀을 바라나이다
32 ೩೨ ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.
나는 주의 종이오니 깨닫게 하사 주의 증거를 알게 하소서
33 ೩೩ ಹೇ. ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.
내가 공과 의를 행하였사오니 나를 압박자에게 붙이지 마옵소서
34 ೩೪ ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
주의 인자하신 대로 주의 종에게 행하사 주의 율례로 내게 가르치소서
35 ೩೫ ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, ಅದೇ ನನ್ನ ಇಷ್ಟ.
내 눈이 주의 구원과 주의 의로운 말씀을 사모하기에 피곤하니이다
36 ೩೬ ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.
찬송을 받으실 여호와여, 주의 율례를 내게 가르치소서
37 ೩೭ ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.
그러므로 내가 주의 계명을 금 곧 정금보다 더 사랑하나이다
38 ೩೮ ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು, ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.
내 육체가 주를 두려워함으로 떨며 내가 또 주의 판단을 두려워하나이다
39 ೩೯ ನನ್ನ ಅವಮಾನವನ್ನು ತೊಲಗಿಸು, ಅದಕ್ಕೋಸ್ಕರ ಅಂಜುತ್ತಿದ್ದೇನೆ. ನಿನ್ನ ಕಟ್ಟಳೆಗಳು ಹಿತಕರವಾಗಿವೆ.
저희가 주의 법을 폐하였사오니 지금은 여호와의 일하실 때니이다
40 ೪೦ ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
주의 증거가 기이하므로 내 영혼이 이를 지키나이다
41 ೪೧ ವಾವ್. ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.
그러므로 내가 범사에 주의 법도를 바르게 여기고 모든 거짓 행위를 미워하나이다
42 ೪೨ ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.
주의 종을 보증하사 복을 얻게 하시고 교만한 자가 나를 압박하지 못하게 하소서
43 ೪೩ ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
내 대적이 주의 말씀을 잊어버렸으므로 내 열성이 나를 소멸하였나이다
44 ೪೪ ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
사람의 압박에서 나를 구속하소서 그리하시면 내가 주의 법도를 지키리이다
45 ೪೫ ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.
주의 명하신 증거는 의롭고 지극히 성실하도소이다
46 ೪೬ ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.
나의 행보를 주의 말씀에 굳게 세우시고 아무 죄악이 나를 주장치 못하게 하소서
47 ೪೭ ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.
저희가 주의 법을 지키지 아니하므로 내 눈물이 시냇물 같이 흐르나이다
48 ೪೮ ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, ಅವುಗಳನ್ನು ನಾನು ಪ್ರೀತಿಸುತ್ತೇನೆ, ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ.
주의 얼굴로 주의 종에게 비취시고 주의 율례로 나를 가르치소서
49 ೪೯ ಸಾಯಿನ್. ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!
내가 주의 계명을 사모하므로 입을 열고 헐떡였나이다
50 ೫೦ ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
여호와여, 주는 의로우시고 주의 판단은 정직하시니이다
51 ೫೧ ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.
주의 말씀을 열므로 우둔한 자에게 비취어 깨닫게 하나이다
52 ೫೨ ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು, ನನ್ನನ್ನು ಸಂತೈಸಿಕೊಂಡಿದ್ದೇನೆ.
주의 이름을 사랑하는 자에게 베푸시던 대로 내게 돌이키사 나를 긍휼히 여기소서
53 ೫೩ ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.
주의 입의 모든 규례를 나의 입술로 선포하였으며
54 ೫೪ ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು.
환난과 우환이 내게 미쳤으나 주의 계명은 나의 즐거움이니이다
55 ೫೫ ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ.
주의 말씀을 묵상하려고 내 눈이 야경이 깊기 전에 깨었나이다
56 ೫೬ ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು.
여호와여, 내가 전심으로 부르짖었사오니 내게 응답하소서 내가 주의 율례를 지키리이다
57 ೫೭ ಹೇತ್. ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.
주의 인자하심을 따라 내 소리를 들으소서 여호와여 주의 규례를 따라 나를 살리소서
58 ೫೮ ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.
내가 주께 부르짖었사오니 나를 구원하소서 내가 주의 증거를 지키리이다
59 ೫೯ ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
주의 의는 영원한 의요 주의 법은 진리로소이다
60 ೬೦ ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.
주의 증거는 영원히 의로우시니 나로 깨닫게 하사 살게 하소서
61 ೬೧ ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.
내가 미천하여 멸시를 당하나 주의 법도를 잊지 아니하였나이다
62 ೬೨ ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.
주의 말씀이 심히 정미하므로 주의 종이 이를 사랑하나이다
63 ೬೩ ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.
내가 모든 재물을 즐거워함 같이 주의 증거의 도를 즐거워하였나이다
64 ೬೪ ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ, ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು.
내가 새벽 전에 부르짖으며 주의 말씀을 바랐사오며
65 ೬೫ ಟೇತ್. ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ, ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ.
구원이 악인에게서 멀어짐은 저희가 주의 율례를 구하지 아니함이니이다
66 ೬೬ ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.
나의 고난을 보시고 나를 건지소서 내가 주의 법을 잊지 아니함이니이다
67 ೬೭ ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.
여호와여, 주의 긍휼이 크오니 주의 규례를 따라 나를 소성케 하소서
68 ೬೮ ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.
주의 말씀을 지키지 아니하는 궤사한 자를 내가 보고 슬퍼하였나이다
69 ೬೯ ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
내가 주의 법도를 묵상하며 주의 도에 주의하며
70 ೭೦ ಅವರ ಹೃದಯದಲ್ಲಿ ಸತ್ಯವಿಲ್ಲ, ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ.
나를 핍박하는 자와 나의 대적이 많으나 나는 주의 증거에서 떠나지 아니하였나이다
71 ೭೧ ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.
내가 전부터 주의 증거를 궁구하므로 주께서 영원히 세우신 것인줄을 알았나이다
72 ೭೨ ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.
내가 주의 법도 사랑함을 보옵소서 여호와여, 주의 인자하신 대로 나를 소성케 하소서
73 ೭೩ ಯೋದ್. ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.
주는 나의 원한을 펴시고 나를 구속하사 주의 말씀대로 나를 소성케 하소서
74 ೭೪ ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.
악을 좇는 자가 가까이 왔사오니 저희는 주의 법에서 머니이다
75 ೭೫ ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.
여호와여, 주께서 가까이 계시오니 주의 모든 계명은 진리니이다
76 ೭೬ ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.
여호와여, 나의 부르짖음이 주의 앞에 이르게 하시고 주의 말씀대로 나를 깨닫게 하소서
77 ೭೭ ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.
방백들이 무고히 나를 핍박하오나 나의 마음은 주의 말씀만 경외하나이다
78 ೭೮ ಗರ್ವಿಷ್ಠರು ಮಾನಭಂಗ ಹೊಂದಲಿ, ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.
내 심령이 주의 증거를 지켰사오며 내가 이를 지극히 사랑하나이다
79 ೭೯ ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು, ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ.
주의 말씀의 강령은 진리오니 주의 의로운 모든 규례가 영원하리이다
80 ೮೦ ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.
여호와여, 내가 주의 구원을 바라며 주의 계명을 행하였나이다
81 ೮೧ ಕಾಫ್. ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.
주의 법을 사랑하는 자에게는 큰 평안이 있으니 저희에게 장애물이 없으리이다
82 ೮೨ ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ? ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು.
내가 거짓을 미워하며 싫어하고 주의 법을 사랑하나이다
83 ೮೩ ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.
주의 율례를 즐거워하며 주의 말씀을 잊지 아니하리이다
84 ೮೪ ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ?
내가 주의 법도와 증거를 지켰사오니 나의 모든 행위가 주의 앞에 있음이니이다
85 ೮೫ ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.
주의 의로운 규례를 인하여 내가 하루 일곱번씩 주를 찬양하나이다!
86 ೮೬ ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.
사람이 많은 탈취물을 얻은 것처럼 나는 주의 말씀을 즐거워하나이다
87 ೮೭ ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.
주께서 율례를 내게 가르치시므로 내 입술이 찬송을 발할지니이다
88 ೮೮ ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು.
내 혼을 살게 하소서 그리하시면 주를 찬송하리이다 주의 규례가 나를 돕게 하소서
89 ೮೯ ಲಾಮೆದ್. ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
내가 주의 법도를 택하였사오니 주의 손이 항상 나의 도움이 되게 하소서
90 ೯೦ ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.
여호와여, 내가 주의 구원을 사모하였사오며 주의 법을 즐거워하나이다
91 ೯೧ ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.
잃은 양 같이 내가 유리하오니 주의 종을 찾으소서 내가 주의 계명을 잊지 아니함이니이다
92 ೯೨ ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.
주의 종을 후대하여 살게 하소서 그리하시면 주의 말씀을 지키리이다
93 ೯೩ ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
나의 간구가 주의 앞에 달하게 하시고 주의 말씀대로 나를 건지소서
94 ೯೪ ನಾನು ನಿನ್ನವನು, ರಕ್ಷಿಸು, ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.
주의 모든 계명이 의로우므로 내 혀가 주의 말씀을 노래할지니이다
95 ೯೫ ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
내 눈을 열어서 주의 법의 기이한 것을 보게 하소서
96 ೯೬ ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು.
나는 땅에서 객이 되었사오니 주의 계명을 내게 숨기지 마소서
97 ೯೭ ಮೆಮ್. ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.
주의 규례를 항상 사모함으로 내 마음이 상하나이다
98 ೯೮ ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ.
교만하여 저주를 받으며 주의 계명에서 떠나는 자를 주께서 꾸짖으셨나이다
99 ೯೯ ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
내가 주의 증거를 지켰사오니 훼방과 멸시를 내게서 떠나게 하소서
100 ೧೦೦ ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ, ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.
방백들도 앉아 나를 훼방하였사오나 주의 종은 주의 율례를 묵상하였나이다
101 ೧೦೧ ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.
주의 증거는 나의 즐거움이요 나의 모사니이다
102 ೧೦೨ ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.
내 영혼이 진토에 붙었사오니 주의 말씀대로 나를 소성케 하소서
103 ೧೦೩ ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.
내가 나의 행위를 고하매 주께서 내게 응답하셨으니 주의 율례를 내게 가르치소서
104 ೧೦೪ ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ.
나로 주의 법도의 길을 깨닫게 하소서 그리하시면 내가 주의 기사를 묵상하리이다
105 ೧೦೫ ನೂನ್. ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.
나의 영혼이 눌림을 인하여 녹사오니 주의 말씀대로 나를 세우소서
106 ೧೦೬ ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
거짓 행위를 내게서 떠나게 하시고 주의 법을 제게 은혜로이 베푸소서
107 ೧೦೭ ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
내가 성실한 길을 택하고 주의 규례를 내 앞에 두었나이다
108 ೧೦೮ ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.
내가 주의 증거에 밀접하였사오니 여호와여, 나로 수치를 당케 마소서
109 ೧೦೯ ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.
주께서 내 마음을 넓히시오면 내가 주의 계명의 길로 달려 가리이다
110 ೧೧೦ ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.
여호와여, 주의 율례의 도를 내게 가르치소서 내가 끝까지 지키리이다
111 ೧೧೧ ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
나로 깨닫게 하소서 내가 주의 법을 준행하며 전심으로 지키리이다
112 ೧೧೨ ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ.
나로 주의 계명의 첩경으로 행케 하소서 내가 이를 즐거워함이니이다
113 ೧೧೩ ಸಾಮೆಕ್. ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.
내 마음을 주의 증거로 향하게 하시고 탐욕으로 향치 말게 하소서
114 ೧೧೪ ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.
내 눈을 돌이켜 허탄한 것을 보지 말게 하시고 주의 도에 나를 소성케 하소서
115 ೧೧೫ ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
주를 경외케 하는 주의 말씀을 주의 종에게 세우소서
116 ೧೧೬ ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.
나의 두려워하는 훼방을 내게서 떠나게 하소서 주의 규례는 선하심이니이다
117 ೧೧೭ ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.
내가 주의 법도를 사모하였사오니 주의 의에 나를 소성케 하소서
118 ೧೧೮ ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.
여호와여, 주의 말씀대로 주의 인자하심과 주의 구원을 내게 임하게 하소서
119 ೧೧೯ ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
그리하시면 내가 나를 훼방하는 자에게 대답할 말이 있사오리니 내가 주의 말씀을 의뢰함이니이다
120 ೧೨೦ ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
진리의 말씀이 내 입에서 조금도 떠나지 말게 하소서 내가 주의 규례를 바랐음이니이다
121 ೧೨೧ ಆಯಿನ್. ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.
내가 주의 율법을 항상 영영히 끝없이 지키리이다
122 ೧೨೨ ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
내가 주의 법도를 구하였사오니 자유롭게 행보할 것이오며
123 ೧೨೩ ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು.
또 열왕 앞에 주의 증거를 말할 때에 수치를 당치 아니하겠사오며
124 ೧೨೪ ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
나의 사랑하는 바 주의 계명을 스스로 즐거워하며
125 ೧೨೫ ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.
또 나의 사랑하는 바 주의 계명에 내 손을 들고 주의 율례를 묵상하리이다
126 ೧೨೬ ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
주의 종에게 하신 말씀을 기억하소서 주께서 나로 소망이 있게 하셨나이다
127 ೧೨೭ ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.
이 말씀은 나의 곤란 중에 위로라 주의 말씀이 나를 살리셨음이니이다
128 ೧೨೮ ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.
교만한 자가 나를 심히 조롱하였어도 나는 주의 법을 떠나지 아니 하였나이다
129 ೧೨೯ ಪೆ. ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.
여호와여, 주의 옛 규례를 내가 기억하고 스스로 위로하였나이다
130 ೧೩೦ ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
주의 율법을 버린 악인들을 인하여 내가 맹렬한 노에 잡혔나이다
131 ೧೩೧ ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.
나의 나그네 된 집에서 주의 율례가 나의 노래가 되었나이다
132 ೧೩೨ ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?
여호와여, 내가 밤에 주의 이름을 기억하고 주의 법을 지켰나이다
133 ೧೩೩ ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
내 소유는 이것이니 곧 주의 법도를 지킨 것이니이다
134 ೧೩೪ ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.
여호와는 나의 분깃이시니 나는 주의 말씀을 지키리라 하였나이다
135 ೧೩೫ ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
내가 전심으로 은혜를 구하였사오니 주의 말씀대로 나를 긍휼히 여기소서
136 ೧೩೬ ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.
내가 내 행위를 생각하고 주의 증거로 내 발을 돌이켰사오며
137 ೧೩೭ ಸಾದ್ದಿ. ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.
주의 계명을 지키기에 신속히 하고 지체치 아니하였나이다
138 ೧೩೮ ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ,
악인의 줄이 내게 두루 얽혔을지라도 나는 주의 법을 잊지 아니하였나이다
139 ೧೩೯ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,
내가 주의 의로운 규례를 인하여 밤중에 일어나 주께 감사하리이다
140 ೧೪೦ ನಿನ್ನ ನುಡಿಯು ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.
나는 주를 경외하는 모든 자와 주의 법도를 지키는 자의 동무라
141 ೧೪೧ ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
여호와여, 주의 인자하심이 땅에 충만하였사오니 주의 율례로 나를 가르치소서
142 ೧೪೨ ನಿನ್ನ ನೀತಿಯು ನಿತ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.
여호와여, 주의 말씀대로 주의 종을 선대하셨나이다
143 ೧೪೩ ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ, ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.
내가 주의 계명을 믿었사오니 명철과 지식을 내게 가르치소서
144 ೧೪೪ ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.
고난 당하기 전에는 내가 그릇 행하였더니 이제는 주의 말씀을 지키나이다
145 ೧೪೫ ಖೋಫ್. ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.
주는 선하사 선을 행하시오니 주의 율례로 나를 가르치소서
146 ೧೪೬ ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು.
교만한 자가 거짓을 지어 나를 치려 하였사오나 나는 전심으로 주의 법도를 지키리이다
147 ೧೪೭ ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು, ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.
저희 마음은 살쪄 지방 같으나 나는 주의 법을 즐거워하나이다
148 ೧೪೮ ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.
고난 당한 것이 내게 유익이라 이로 인하여 내가 주의 율례를 배우게 되었나이다
149 ೧೪೯ ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
주의 입의 법이 내게는 천천 금은보다 승하니이다
150 ೧೫೦ ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ.
주의 손이 나를 만들고 세우셨사오니 나로 깨닫게 하사 주의 계명을 배우게 하소서
151 ೧೫೧ ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ, ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.
주를 경외하는 자가 나를 보고 기뻐할 것은 내가 주의 말씀을 바라는 연고니이다
152 ೧೫೨ ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.
여호와여, 내가 알거니와 주의 판단은 의로우시고 주께서 나를 괴롭게 하심은 성실하심으로 말미암음이니이다
153 ೧೫೩ ರೇಷ್. ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.
구하오니 주의 종에게 하신 말씀대로 주의 인자하심이 나의 위안이 되게 하시며
154 ೧೫೪ ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
주의 긍휼히 여기심이 내게 임하사 나로 살게 하소서 주의 법은 나의 즐거움이니이다
155 ೧೫೫ ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
교만한 자가 무고히 나를 엎드러뜨렸으니 저희로 수치를 당케 하소서 나는 주의 법도를 묵상하리이다
156 ೧೫೬ ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.
주를 경외하는 자로 내게 돌아오게 하소서 그리하시면 저희가 주의 증거를 알리이다
157 ೧೫೭ ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.
내 마음으로 주의 율례에 완전케 하사 나로 수치를 당치 않게 하소서
158 ೧೫೮ ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.
나의 영혼이 주의 구원을 사모하기에 피곤하오나 나는 오히려 주의 말씀을 바라나이다
159 ೧೫೯ ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
나의 말이 주께서 언제나 나를 안위하시겠나이까 하면서 내 눈이 주의 말씀을 바라기에 피곤하니이다
160 ೧೬೦ ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.
내가 연기 중의 가죽병 같이 되었으나 오히려 주의 율례를 잊지 아니하나이다
161 ೧೬೧ ಷಿನ್. ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.
주의 종의 날이 얼마나 되나이까 나를 핍박하는 자를 주께서 언제나 국문하시리이까?
162 ೧೬೨ ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.
주의 법을 좇지 아니하는 교만한 자가 나를 해하려고 웅덩이를 팠나이다
163 ೧೬೩ ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
주의 모든 계명은 신실하니이다 저희가 무고히 나를 핍박하오니 나를 도우소서
164 ೧೬೪ ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.
저희가 나를 세상에서 거의 멸하였으나 나는 주의 법도를 버리지 아니하였사오니
165 ೧೬೫ ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
주의 인자하심을 따라 나로 소성케 하소서 그리하시면 주의 입의 증거를 내가 지키리이다
166 ೧೬೬ ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, ನಿರೀಕ್ಷಿಸುತ್ತಾ ಇದ್ದೇನೆ, ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.
여호와여, 주의 말씀이 영원히 하늘에 굳게 섰사오며
167 ೧೬೭ ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ.
주의 성실하심은 대대에 이르나이다 주께서 땅을 세우셨으므로 땅이 항상 있사오니
168 ೧೬೮ ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
천지가 주의 규례대로 오늘까지 있음은 만물이 주의 종이 된 연고니이다
169 ೧೬೯ ತಾವ್. ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
주의 법이 나의 즐거움이 되지 아니하였더면 내가 내 고난 중에 멸망하였으리이다
170 ೧೭೦ ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
내가 주의 법도를 영원히 잊지 아니하오니 주께서 이것들로 나를 살게 하심이니이다
171 ೧೭೧ ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
나는 주의 것이오니 나를 구원하소서 내가 주의 법도를 찾았나이다
172 ೧೭೨ ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.
악인이 나를 멸하려고 엿보오나 나는 주의 증거를 생각하겠나이다
173 ೧೭೩ ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ, ನಿನ್ನ ಕೈ ನನಗೆ ನೆರವಾಗಲಿ.
내가 보니 모든 완전한 것이 다 끝이 있어도 주의 계명은 심히 넓으니이다
174 ೧೭೪ ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.
내가 주의 법을 어찌 그리 사랑하는지요 내가 그것을 종일 묵상하나이다
175 ೧೭೫ ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.
주의 계명이 항상 나와 함께 하므로 그것이 나로 원수보다 지혜롭게 하나이다
176 ೧೭೬ ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.
내가 주의 증거를 묵상하므로 나의 명철함이 나의 모든 스승보다 승하며

< ಕೀರ್ತನೆಗಳು 119 >