< ಕೀರ್ತನೆಗಳು 12 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.
【求免於是非】 達味詩歌,交與樂官,八度低音。 主,求你拯救,因為熱心者已缺少,忠誠的人在人間也已絕跡不見了。
2 ೨ ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
人們彼此言談虛偽,嘴唇圓滑,口是心非,
3 ೩ ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.
願上主將一切欺詐的口唇除去。把大言不慚的舌頭剪除!
4 ೪ ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.
他們揚言說:「我們以口以舌取勝;有口有唇護衛我們,誰能作我們的主人?」
5 ೫ ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
「為了貧苦者的委屈,為了窮困者的歎息,我要立刻站起──上主說:將渴望救援的人救起。
6 ೬ ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
上主的聖言是真誠的聖言,如同純銀經過七次的鍛鍊。
7 ೭ ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
上主,懇求你護祐我們,由這一代常拯救我們。
8 ೮ ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
惡人在四周往來追蹤,實如令人生厭的毒蟲。