< ಕೀರ್ತನೆಗಳು 12 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಶೆಮಿನಿಥ್ ಸ್ವರದೊಂದಿಗೆ ಹಾಡತಕ್ಕದ್ದು. ದಾವೀದನ ಕೀರ್ತನೆ. ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.
2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.
3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.
ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.
4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.
ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?”
5 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”
6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.
7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,
8 ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.

< ಕೀರ್ತನೆಗಳು 12 >