< ಕೀರ್ತನೆಗಳು 121 >

1 ಯಾತ್ರಾಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?
我舉目向聖山瞻望,我的救助要來自何方。
2 ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.
我的救助來自上主,是他創造了天地宇宙。
3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.
他決不讓您的腳滑倒;保護您的也決不睡覺。
4 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
看那保護以色列者,不打盹也不會睡著。
5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.
上主站在您的右邊,作您的護衛和保全。
6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.
白天太陽必不傷您,黑夜月亮也不害您。
7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.
上主保護您於任何災患,上主保護您的心靈平安。
8 ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
上主保護您出外,保護您回來,從現在起一直到永遠。

< ಕೀರ್ತನೆಗಳು 121 >