< ಕೀರ್ತನೆಗಳು 122 >
1 ೧ ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
Quale gioia, quando mi dissero: «Andremo alla casa del Signore». Canto delle ascensioni. Di Davide.
2 ೨ ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
E ora i nostri piedi si fermano alle tue porte, Gerusalemme!
3 ೩ ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.
Gerusalemme è costruita come città salda e compatta.
4 ೪ ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
Là salgono insieme le tribù, le tribù del Signore, secondo la legge di Israele, per lodare il nome del Signore.
5 ೫ ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
Là sono posti i seggi del giudizio, i seggi della casa di Davide.
6 ೬ ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
Domandate pace per Gerusalemme: sia pace a coloro che ti amano,
7 ೭ ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”
sia pace sulle tue mura, sicurezza nei tuoi baluardi.
8 ೮ ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.
Per i miei fratelli e i miei amici io dirò: «Su di te sia pace!».
9 ೯ ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
Per la casa del Signore nostro Dio, chiederò per te il bene.