< ಕೀರ್ತನೆಗಳು 123 >
1 ೧ ಯಾತ್ರಾಗೀತೆ. ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
Canticum graduum. Ad te levavi oculos meos, qui habitas in cælis.
2 ೨ ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
Ecce sicut oculi servorum in manibus dominorum suorum; sicut oculi ancillæ in manibus dominæ suæ: ita oculi nostri ad Dominum Deum nostrum, donec misereatur nostri.
3 ೩ ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
Miserere nostri, Domine, miserere nostri, quia multum repleti sumus despectione;
4 ೪ ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.
quia multum repleta est anima nostra opprobrium abundantibus, et despectio superbis.