< ಕೀರ್ತನೆಗಳು 125 >

1 ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
Hac ilahisi RAB'be güvenenler Siyon Dağı'na benzer, Sarsılmaz, sonsuza dek durur.
2 ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
Dağlar Yeruşalim'i nasıl kuşatmışsa, RAB de halkını öyle kuşatmıştır, Şimdiden sonsuza dek.
3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
Kalmayacak kötülerin asası, Doğruların payına düşen toprakta, Yoksa doğrular haksızlığa el uzatabilir.
4 ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.
İyilik et, ya RAB, İyilere, yüreği temiz olanlara.
5 ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.
Ama kendi halkından eğri yollara sapanları, RAB kötü uluslarla birlikte kovacak. İsrail'e esenlik olsun!

< ಕೀರ್ತನೆಗಳು 125 >