< ಕೀರ್ತನೆಗಳು 126 >
1 ೧ ಯಾತ್ರಾಗೀತೆ. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.
(성전에 올라가는 노래) 여호와께서 시온의 포로를 돌리실 때에 우리가 꿈꾸는 것 같았도다
2 ೨ ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
그 때에 우리 입에는 웃음이 가득하고 우리 혀에는 찬양이 찼었도다 열방 중에서 말하기를 여호와께서 저희를 위하여 대사를 행하셨다 하였도다
3 ೩ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
여호와를 위하여 대사를 행하셨으니 우리는 기쁘도다
4 ೪ ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
여호와여, 우리의 포로를 남방 시내들 같이 돌리소서
5 ೫ ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
눈물을 흘리며 씨를 뿌리는 자는 기쁨으로 거두리로다
6 ೬ ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
울며 씨를 뿌리러 나가는 자는 정녕 기쁨으로 그 단을 가지고 돌아 오리로다