< ಕೀರ್ತನೆಗಳು 127 >
1 ೧ ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
若不是上主興工建屋,建築的人是徒然勞苦;若不是上主護守城堡,守城的人白白驚醒護守。
2 ೨ ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
您們很早起床盡屬徒然,每夜坐到深更圖謀打算,為了求食經過多少辛酸;唯獨天主賜所愛者安眠。
3 ೩ ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.
的確子女全是上主的賜予,胎兒也全是他的報酬。
4 ೪ ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
年青少壯所生的子嗣,有如勇士手中的箭矢。
5 ೫ ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
裝滿自己箭囊的人,真有福氣,城門前爭辯,不受羞恥。