< ಕೀರ್ತನೆಗಳು 127 >

1 ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
솔로몬의 시 곧 성전에 올라가는 노래 여호와께서 집을 세우지 아니하시면 세우는 자의 수고가 헛되며 여호와께서 성을 지키지 아니하시면 파수꾼의 경성함이 허사로다
2 ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
너희가 일찍이 일어나고 늦게 누우며 수고의 떡을 먹음이 헛되도다 그러므로 여호와께서 그 사랑하시는 자에게는 잠을 주시는도다
3 ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.
자식은 여호와의 주신 기업이요 태의 열매는 그의 상급이로다
4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
젊은 자의 자식은 장사의 수중의 화살 같으니
5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
이것이 그 전통에 가득한 자는 복되도다 저희가 성문에서 그 원수와 말할 때에 수치를 당치 아니하리로다

< ಕೀರ್ತನೆಗಳು 127 >