< ಕೀರ್ತನೆಗಳು 128 >
1 ೧ ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
Zarándoklás éneke. Boldog mindaz, a ki féli az Örökkévalót, a ki útjaiban jár!
2 ೨ ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.
Kezeid szerzeményét midőn eszed, boldog vagy és jó dolgod van.
3 ೩ ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
Feleséged akár a gyümölcstermő szőllőtő házad belsejében; gyermekeid akár olajfacsemeték körülötte asztalodnak.
4 ೪ ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.
Íme, bizony így áldatik meg a férfi, aki féli az Örökkévalót!
5 ೫ ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
Áldjon meg téged az Örökkévaló Cziónból és nézd Jeruzsálem jólétét élted minden napjaiban,
6 ೬ ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.
és láss gyermekeket gyermekeidtől! Béke Izraélre!