< ಕೀರ್ತನೆಗಳು 13 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
ASTA ngaean, O Jeova, nae, umalefa jao guajo para taejinecog? asta ngaean nae unnaatog y matamo guiya guajo.
2 ೨ ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?
Asta ngaean nae jujaso y pinagat gui antijo, anae guaja pinite gui corasonjo todo y jaane? Asta ngaean nae ufangajulo y enimigujo guiya guajo?
3 ೩ ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
Jaso ya jungogyo, O Jeova, Yuusso: ina y atadogjo sija para mungayo maego gui maego finatae.
4 ೪ ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.
Sa chaña umaalog y enimigujo: Jugana güe: sa chaña y enimigujo fanmamagof yaguin calamtenyo.
5 ೫ ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
Lao guajo, y minaasemo nae juangocoyo: ya umagof y corasonjo gui satbasionmo.
6 ೬ ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.
Bae cantaye si Jeova: sa jafatinas y mauleg guiya guajo.