< ಕೀರ್ತನೆಗಳು 132 >
1 ೧ ಯಾತ್ರಾಗೀತೆ. ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
Manst þú, Drottinn, allar þjáningar Davíðs?
2 ೨ ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
Hann náði ekki að hvílast, kom ekki dúr á auga.
3 ೩ “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,
Þá kom honum í hug að reisa hús yfir örk þína,
4 ೪ ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು
musteri fyrir hinn volduga í Ísrael.
5 ೫ ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
Og hann hét því að svo skyldi verða og sór hátíðlegan eið fyrir Drottni.
6 ೬ ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.
Fyrst var örkin í Síló í Efrata og síðan í Jaar.
7 ೭ “ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”
Nú fær hún stað í musterinu, bústað Guðs hér á jörð. Þar munum við falla fram og tilbiðja hann.
8 ೮ ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.
Rís þú upp, Drottinn! Gakktu inn í musteri þitt ásamt örk þinni, tákni máttar þíns!
9 ೯ ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
Við munum íklæða prestana hvítum skrúða, klæðum hreinleikans. Og þjóðin mun hrópa fagnaðaróp!
10 ೧೦ ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
Vísaðu Davíð þjóni þínum ekki frá – konunginum sem þú útvaldir handa þjóð þinni.
11 ೧೧ ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
Þú lofaðir Davíð því að sonur hans yrði eftirmaður hans, skyldi erfa hásætið. Vissulega munt þú aldrei ganga á bak orða þinna!
12 ೧೨ ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
Og annað fyrirheit gafstu Davíð líka: Ef afkomendur hans héldu ákvæði sáttmála þíns við þig, þá mundi konungdómurinn haldast í ætt Davíðs að eilífu.
13 ೧೩ ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
Ó, Drottinn, þú hefur útvalið Jerúsalem að bústað þínum.
14 ೧೪ ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.
„Þetta er hvíldarstaður minn um aldur og ævi, “sagðir þú, „staðurinn sem ég hef þráð.
15 ೧೫ ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;
Borg þessa vil ég blessa og auðga og fátæklingar hennar fá nóg að borða.
16 ೧೬ ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.
Presta hennar mun ég íklæða hjálpræði, og hinir trúuðu er þar búa munu hrópa fagnaðaróp.
17 ೧೭ ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
Veldi Davíðs mun aukast, og ég mun gefa honum son, eftirmann í hásæti hans.
18 ೧೮ ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”
Ég hyl óvini hans skömm, en á honum skal kóróna hans ljóma.“