< ಕೀರ್ತನೆಗಳು 136 >

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
Ku yi godiya ga Ubangiji, gama nagari ne shi.
2 ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
Ku yi godiya ga Allahn alloli.
3 ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
Ku yi godiya ga Ubangijin iyayengiji.
4 ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.
Gare shi wanda shi kaɗai yake aikata abubuwan banmamaki,
5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
Wanda ta wurin ganewarsa ya yi sammai,
6 ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
Wanda ya shimfiɗa duniya a kan ruwaye,
7 ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
Wanda ya yi manyan haskoki,
8 ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
Rana don tă yi mulkin yini,
9 ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು.
Wata da taurari kuma don su yi mulkin dare;
10 ೧೦ ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
Gare shi wanda ya kashe’ya’yan fari Masar
11 ೧೧ ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
Ya kuma fitar da Isra’ila daga cikinsu
12 ೧೨ ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
Da hannu mai ƙarfi da hannu mai iko;
13 ೧೩ ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
Gare shi wanda ya raba Jan Teku biyu
14 ೧೪ ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
Ya kawo Isra’ila ta tsakiyarsa,
15 ೧೫ ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
Amma ya share Fir’auna da mayaƙansa cikin Jan Teku;
16 ೧೬ ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
Gare shi wanda ya bi da mutanensa cikin hamada,
17 ೧೭ ದೊಡ್ಡ ಅರಸರನ್ನು ಹೊಡೆದನು, ಆತನ ಪ್ರೀತಿಯು ಶಾಶ್ವತವಾದದ್ದು.
Wanda ya buge manyan sarakuna,
18 ೧೮ ಶ್ರೇಷ್ಠ ರಾಜರನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
Ya karkashe manyan sarakuna,
19 ೧೯ ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
Sihon sarkin Amoriyawa
20 ೨೦ ಬಾಷಾನಿನ ಅರಸನಾದ ಓಗನು ಇನ್ನೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
Da kuma Og sarkin Bashan,
21 ೨೧ ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
Ya kuma ba da ƙasarsu gādo,
22 ೨೨ ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು.
Gādo ga bawansa Isra’ila;
23 ೨೩ ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.
Shi wanda ya tuna da mu cikin ƙasƙancinmu
24 ೨೪ ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
Ya kuma’yantar da mu daga abokan gābanmu,
25 ೨೫ ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು.
Wanda kuma ke ba da abinci ga kowace halitta.
26 ೨೬ ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
Ku yi godiya ga Allah na sama.

< ಕೀರ್ತನೆಗಳು 136 >