< ಕೀರ್ತನೆಗಳು 138 >
1 ೧ ದಾವೀದನ ಕೀರ್ತನೆ. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.
Davidova. Slavil te bodem iz vsega srca svojega; v pričo oblastev bodem ti prepeval.
2 ೨ ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
Priklanjal se bodem proti svetišču svetosti tvoje, in slavil ime tvoje, zavoljo milosti tvoje in zavoljo tvoje zvestobe; ker poveličuješ z vsem imenom svojim govor svoj.
3 ೩ ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
Kateri dan sem vpil, tisti dan si me uslišal; storil si, da me je povzdignila v srci mojem moč.
4 ೪ ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.
Slavili te bodo, Gospod, vsi kralji zemeljski, ko bodo slišali govor tvojih ust.
5 ೫ ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
In peli bodo s potov Gospodovih, da je velika slava Gospodova.
6 ೬ ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
Dasì je vzvišen Gospod, vendar gleda na nizkega; dasi visok, spoznava iz daljave.
7 ೭ ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.
Ako hodim po sredi stiske, ohraniš me živega; v obraz sovražnikov mojih iztegneš roko svojo, in desnica tvoja me ohrani.
8 ೮ ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.
Gospod naj doprinese zame; Gospod, milost tvoja je vekomaj; od rok svojih dél ne odjenjaj!