< ಕೀರ್ತನೆಗಳು 139 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
१प्रधान बजानेवाले के लिये दाऊद का भजन हे यहोवा, तूने मुझे जाँचकर जान लिया है।
2 ೨ ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
२तू मेरा उठना और बैठना जानता है; और मेरे विचारों को दूर ही से समझ लेता है।
3 ೩ ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
३मेरे चलने और लेटने की तू भली भाँति छानबीन करता है, और मेरी पूरी चाल चलन का भेद जानता है।
4 ೪ ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
४हे यहोवा, मेरे मुँह में ऐसी कोई बात नहीं जिसे तू पूरी रीति से न जानता हो।
5 ೫ ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.
५तूने मुझे आगे-पीछे घेर रखा है, और अपना हाथ मुझ पर रखे रहता है।
6 ೬ ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
६यह ज्ञान मेरे लिये बहुत कठिन है; यह गम्भीर और मेरी समझ से बाहर है।
7 ೭ ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
७मैं तेरे आत्मा से भागकर किधर जाऊँ? या तेरे सामने से किधर भागूँ?
8 ೮ ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. (Sheol )
८यदि मैं आकाश पर चढ़ूँ, तो तू वहाँ है! यदि मैं अपना खाट अधोलोक में बिछाऊँ तो वहाँ भी तू है! (Sheol )
9 ೯ ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
९यदि मैं भोर की किरणों पर चढ़कर समुद्र के पार जा बसूँ,
10 ೧೦ ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
१०तो वहाँ भी तू अपने हाथ से मेरी अगुआई करेगा, और अपने दाहिने हाथ से मुझे पकड़े रहेगा।
11 ೧೧ ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?
११यदि मैं कहूँ कि अंधकार में तो मैं छिप जाऊँगा, और मेरे चारों ओर का उजियाला रात का अंधेरा हो जाएगा,
12 ೧೨ ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.
१२तो भी अंधकार तुझ से न छिपाएगा, रात तो दिन के तुल्य प्रकाश देगी; क्योंकि तेरे लिये अंधियारा और उजियाला दोनों एक समान हैं।
13 ೧೩ ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
१३तूने मेरे अंदरूनी अंगों को बनाया है; तूने मुझे माता के गर्भ में रचा।
14 ೧೪ ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
१४मैं तेरा धन्यवाद करूँगा, इसलिए कि मैं भयानक और अद्भुत रीति से रचा गया हूँ। तेरे काम तो आश्चर्य के हैं, और मैं इसे भली भाँति जानता हूँ।
15 ೧೫ ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
१५जब मैं गुप्त में बनाया जाता, और पृथ्वी के नीचे स्थानों में रचा जाता था, तब मेरी देह तुझ से छिपी न थीं।
16 ೧೬ ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
१६तेरी आँखों ने मेरे बेडौल तत्व को देखा; और मेरे सब अंग जो दिन-दिन बनते जाते थे वे रचे जाने से पहले तेरी पुस्तक में लिखे हुए थे।
17 ೧೭ ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.
१७मेरे लिये तो हे परमेश्वर, तेरे विचार क्या ही बहुमूल्य हैं! उनकी संख्या का जोड़ कैसा बड़ा है!
18 ೧೮ ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
१८यदि मैं उनको गिनता तो वे रेतकणों से भी अधिक ठहरते। जब मैं जाग उठता हूँ, तब भी तेरे संग रहता हूँ।
19 ೧೯ ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.
१९हे परमेश्वर निश्चय तू दुष्ट को घात करेगा! हे हत्यारों, मुझसे दूर हो जाओ।
20 ೨೦ ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.
२०क्योंकि वे तेरे विरुद्ध बलवा करते और छल के काम करते हैं; तेरे शत्रु तेरा नाम झूठी बात पर लेते हैं।
21 ೨೧ ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
२१हे यहोवा, क्या मैं तेरे बैरियों से बैर न रखूँ, और तेरे विरोधियों से घृणा न करूँ?
22 ೨೨ ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ.
२२हाँ, मैं उनसे पूर्ण बैर रखता हूँ; मैं उनको अपना शत्रु समझता हूँ।
23 ೨೩ ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
२३हे परमेश्वर, मुझे जाँचकर जान ले! मुझे परखकर मेरी चिन्ताओं को जान ले!
24 ೨೪ ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.
२४और देख कि मुझ में कोई बुरी चाल है कि नहीं, और अनन्त के मार्ग में मेरी अगुआई कर!