< ಕೀರ್ತನೆಗಳು 139 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
Wɔde ma dwonkyerɛfo. Dawid dwom. Awurade, woahwehwɛ me mu na woahu me.
2 ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
Wunim mʼasetena ne me sɔre; wufi akyirikyiri hu mʼadwene mu.
3 ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
Wunim mʼadifi ne me nnae mu; wunim mʼakwan nyinaa mu.
4 ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
Ansa na mebue mʼano akasa no Awurade, na wunim ne nyinaa dedaw.
5 ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.
Woakata me ho nyinaa ahyia na wobɔ me ho ban.
6 ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
Saa nimdeɛ yi yɛ me nwonwa dodo, ɛkɔ soro dodo ma me sɛ medu ho.
7 ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
Ɛhe na metumi afi wo honhom anim akɔ? Ɛhe na metumi aguan afi wʼanim akɔ?
8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. (Sheol h7585)
Sɛ meforo soro a, wowɔ hɔ. Na mekɔsɛw me kɛtɛ wɔ asaman a, wo ni. (Sheol h7585)
9 ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
Sɛ mede adekyee ntaban tu na mekɔtena po akyi nohɔ a,
10 ೧೦ ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
mpo hɔ na wo nsa begya me akɔ, na wo nsa nifa beso me mu.
11 ೧೧ ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?
Na meka se, “Ampa ara sum mmɛkata me so na hann nnan adesae ntwa me ho nhyia a,”
12 ೧೨ ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.
sum mpo nyɛ sum mma wo; na anadwo bɛhyerɛn sɛ awia; sum ne hann yɛ wo pɛ.
13 ೧೩ ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
Na wo na wobɔɔ me honhom wonwen me wɔ me na awotwaa mu.
14 ೧೪ ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
Mekamfo wo, efisɛ woyɛɛ me anwonwakwan so a ɛyɛ hu; wo nnwuma yɛ nwonwa. Minim ɛno yiye pa ara.
15 ೧೫ ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
Wɔamfa me bɔbea anhintaw wo bere a wɔyɛɛ me kokoa mu no; bere a wɔnwenee me wɔ asase bun mu no,
16 ೧೬ ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
wʼani huu me, bere a meyɛ mogyatɔw no. Nna dodow a woatwa ama me no, wɔakyerɛw ne nyinaa wɔ wo nhoma mu ansa na mu baako reba mu.
17 ೧೭ ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.
Onyankopɔn, wo nsusuwii som bo ma me! woka ne nyinaa bɔ mu a, ɛtrɛw dodo!
18 ೧೮ ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
Sɛ mise mɛkan a, ne dodow bɛboro mpoano nwea, sɛ minyan a, me ne wo wɔ hɔ ara.
19 ೧೯ ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.
Sɛ anka, Onyankopɔn, wubekunkum amumɔyɛfo ɛ! Mumfi me so, mo a moyɛ mogyapɛfo!
20 ೨೦ ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.
Wɔde adwemmɔne ka wo ho asɛm; wʼatamfo mmmɔ wo din pa.
21 ೨೧ ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
Awurade, metan wɔn a wɔtan wo, na mikyi wɔn a wɔsɔre tia wo no ana?
22 ೨೨ ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ.
Minni hwee sɛ ɔtan a mewɔ ma wɔn; mefa wɔn sɛ mʼatamfo.
23 ೨೩ ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
Hwehwɛ me mu, Onyankopɔn, na hu me koma; sɔ me hwɛ, na hu mʼadwene.
24 ೨೪ ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.
Hwɛ sɛ bɔne bi wɔ me mu a, na di mʼanim fa daa nkwa kwan so.

< ಕೀರ್ತನೆಗಳು 139 >