< ಕೀರ್ತನೆಗಳು 141 >
1 ೧ ದಾವೀದನ ಕೀರ್ತನೆ. ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.
上主,我呼求您,請求速來救助我;上主,我呼求您,請您聽我的呼號。
2 ೨ ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
願我向您的祈禱,像馨香上升;願我的手高舉,如同晚祭的高騰。
3 ೩ ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
上主,求您在我的口邊派守衛,求您在我的唇前派警備。
4 ೪ ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
莫讓我的心傾向邪道,免得我再去犯罪作惡;莫讓我與惡人同作壞事,免得我嚐食他們的美味。
5 ೫ ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
義人責打我,算是我的恩遇,他責斥我,是給我頭的傅油。我的頭也決不會加以抗拒,我仍然為迫害我的人祈求。
6 ೬ ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.
當他們的首領被拋於巖石時,纔感覺到我的話是如何甘飴。
7 ೭ ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. (Sheol )
他們的骨頭被棄置在陰府門旁,像人耕地掘田,將土塊任意拋放。 (Sheol )
8 ೮ ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
上主天主,我的雙目一直仰望你,我信賴你,不要將我的靈魂拋棄。
9 ೯ ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.
求你保護我免陷於他們為我設的網羅,求你使我能夠脫離為非作歹者的圈套。
10 ೧೦ ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.
願惡人一起墮入自設的網羅,而我卻得以安然無恙地脫逃。