< ಕೀರ್ತನೆಗಳು 141 >

1 ದಾವೀದನ ಕೀರ್ತನೆ. ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.
Господи, воззвах к Тебе, услыши мя: вонми гласу моления моего, внегда воззвати ми к Тебе.
2 ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
Да исправится молитва моя яко кадило пред Тобою: воздеяние руку моею, жертва вечерняя.
3 ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
Положи, Господи, хранение устом моим и дверь ограждения о устнах моих.
4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
Не уклони сердце мое в словеса лукавствия, непщевати вины о гресех с человеки делающими беззаконие: и не сочтуся со избранными их.
5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
Накажет мя праведник милостию и обличит мя, елей же грешнаго да не намастит главы моея: яко еще и молитва моя во благоволениих их.
6 ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.
Пожерты быша при камени судии их: услышатся глаголи мои, яко возмогоша.
7 ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. (Sheol h7585)
Яко толща земли проседеся на земли, расточишася кости их при аде. (Sheol h7585)
8 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
Яко к Тебе, Господи, Господи, очи мои: на Тя уповах, не отими душу мою:
9 ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.
сохрани мя от сети, юже составиша ми, и от соблазн делающих беззаконие.
10 ೧೦ ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.
Падут во мрежу свою грешницы: един есмь аз, дондеже прейду.

< ಕೀರ್ತನೆಗಳು 141 >