< ಕೀರ್ತನೆಗಳು 142 >
1 ೧ ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.
Oktató dal Dávidtól, midőn a barlangban volt. Ima. Hangommal az Örökkévalóhoz kiáltok, hangommal az Örökkévalóhoz könyörgök.
2 ೨ ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.
Kiöntöm előtte panaszomat, szorultságomat elmondom előtte.
3 ೩ ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.
Midőn elborul bennem szellemem – hisz te ismered ösvényemet – az úton, melyen járok, tőrt rejtettek el nekem.
4 ೪ ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
Tekints jobbra s nézd: nincs senkim, a ki ismerne; menekvés elveszett előlem, nincs ki lelkemmel törődnék.
5 ೫ ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.
Kiáltottam hozzád, Örökkévaló, azt mondtam: te vagy menedékem, osztályrészem az élők országában.
6 ೬ ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.
Figyelj fohászomra, mert megfogytam nagyon, ments meg engem üldözőimtől, mert hatalmasabbak nálam!
7 ೭ ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.
Hozd ki a börtönből lelkemet, hogy magasztalja nevedet, velem ékeskednek az igazak, midőn jót végzel rajtam.