< ಕೀರ್ತನೆಗಳು 143 >
1 ೧ ದಾವೀದನ ಕೀರ್ತನೆ. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
Psalm Dawida. PANIE, wysłuchaj mojej modlitwy [i] nadstaw ucha na moje prośby; wysłuchaj mnie w swojej wierności [i] sprawiedliwości.
2 ೨ ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
A nie stawiaj przed sądem swojego sługi, bo nikt z żyjących nie będzie usprawiedliwiony przed tobą.
3 ೩ ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.
Nieprzyjaciel bowiem prześladuje moją duszę, powalił na ziemię moje życie; sprawił, że muszę mieszkać w ciemności jak dawno umarły.
4 ೪ ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ.
I mój duch jest zdruzgotany we mnie, serce we mnie niszczeje.
5 ೫ ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;
Wspominam dawne dni, rozmyślam o wszystkich twoich dziełach i rozważam czyny twoich rąk.
6 ೬ ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. (ಸೆಲಾ)
Wyciągam ku tobie swoje ręce; moja dusza [pragnie] ciebie jak sucha ziemia. (Sela)
7 ೭ ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
Wysłuchaj mnie prędko, PANIE; mój duch omdlewa; nie ukrywaj przede mną swego oblicza, bym się nie stał jak ci, którzy schodzą do dołu.
8 ೮ ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
Spraw, abym rano słyszał o twoim miłosierdziu, bo tobie ufam; oznajmij mi drogę, którą mam chodzić, bo do ciebie wznoszę moją duszę.
9 ೯ ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.
Ocal mnie od moich wrogów, PANIE; do ciebie się uciekam.
10 ೧೦ ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
Naucz mnie czynić twoją wolę, bo ty jesteś moim Bogiem; twój duch jest dobry; prowadź mnie do ziemi prawości.
11 ೧೧ ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.
Ożyw mnie, PANIE, dla twojego imienia; ze względu na twoją sprawiedliwość wyprowadź moją duszę z utrapienia.
12 ೧೨ ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.
W swoim miłosierdziu wytrać moich wrogów i zgładź wszystkich przeciwników mojej duszy, bo jestem twoim sługą.