< ಕೀರ್ತನೆಗಳು 144 >
1 ೧ ದಾವೀದನ ಕೀರ್ತನೆ. ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
De David. Béni soit l’Eternel, mon rocher, qui a exercé mes mains au combat, mes doigts à l’art de la guerre!
2 ೨ ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
Il est mon bienfaiteur et mon rempart, ma forteresse et ma sauvegarde; il est mon bouclier, et en lui je m’abrite: il soumet les nations à mon pouvoir.
3 ೩ ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
Seigneur, qu’est-ce que l’homme, que tu t’en soucies? le fils de l’homme que tu tiennes compte de lui?
4 ೪ ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
L’Homme ressemble à un souffle, ses jours sont comme une ombre qui passe.
5 ೫ ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
Seigneur, incline tes cieux et descends, effleure les montagnes, afin qu’elles s’enveloppent de fumée.
6 ೬ ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.
Fais briller des éclairs et disperse-les, mes ennemis, lance tes flèches et jette le trouble parmi eux.
7 ೭ ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
Etends les mains du haut des cieux, arrache-moi au danger, sauve-moi des flots puissants, du pouvoir des fils de l’étranger,
8 ೮ ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.
dont la bouche profère la fausseté, et dont la droite est une droite mensongère.
9 ೯ ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
Je veux, ô Dieu, te chanter un cantique nouveau, te célébrer sur le luth à dix cordes,
10 ೧೦ ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
toi qui donnes la victoire aux rois, qui délivres David, ton serviteur, du glaive meurtrier.
11 ೧೧ ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
Arrache-moi au danger, sauve-moi du pouvoir des fils de l’étranger, dont la bouche profère la fausseté, et dont la droite est une droite mensongère.
12 ೧೨ ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
Grâce à toi, nos fils sont comme des plants, qui poussent grandement dans leur jeune âge, nos filles comme des colonnes d’angle, sculptées sur le modèle du palais;
13 ೧೩ ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
nos greniers, bien garnis, regorgent de provisions de toute sorte; nos brebis se multiplient par milliers et par myriades dans nos campagnes;
14 ೧೪ ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
nos bêtes de somme sont lourdement chargées: point d’irruption du dehors, point d’exil forcé, nul cri d’alarme sur nos places publiques!
15 ೧೫ ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.
Heureux le peuple qui jouit d’un tel sort! Heureux le peuple qui reconnaît l’Eternel comme son Dieu!