< ಕೀರ್ತನೆಗಳು 144 >

1 ದಾವೀದನ ಕೀರ್ತನೆ. ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
ख़ुदावन्द मेरी चट्टान मुबारक हो, जो मेरे हाथों को जंग करना, और मेरी उँगलियों को लड़ना सिखाता है।
2 ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
वह मुझ पर शफ़क़त करने वाला, और मेरा क़िला' है; मेरा ऊँचा बुर्ज और मेरा छुड़ाने वाला, वह मेरी ढाल और मेरी पनाहगाह है; जो मेरे लोगों को मेरे ताबे' करता है।
3 ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
ऐ ख़ुदावन्द, इंसान क्या है कि तू उसे याद रख्खे? और आदमज़ाद क्या है कि तू उसका ख़याल करे?
4 ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
इंसान बुतलान की तरह है; उसके दिन ढलते साये की तरह हैं।
5 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
ऐ ख़ुदावन्द, आसमानों को झुका कर उतर आ! पहाड़ों को छू, तो उनसे धुआँ उठेगा!
6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.
बिजली गिराकर उनको तितर बितर कर दे, अपने तीर चलाकर उनको शिकस्त दे!
7 ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
ऊपर से हाथ बढ़ा, मुझे रिहाई दे और बड़े सैलाब, या'नी परदेसियों के हाथ से छुड़ा।
8 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.
जिनके मुँह से बेकारी निकलती रहती है, और जिनका दहना हाथ झूट का दहना हाथ है।
9 ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
ऐ ख़ुदा! मैं तेरे लिए नया हम्द गाऊँगा; दस तार वाली बरबत पर मैं तेरी मदहसराई करूँगा।
10 ೧೦ ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
वही बादशाहों को नजात बख़्शता है; और अपने बन्दे दाऊद को हलाक़त की तलवार से बचाता है।
11 ೧೧ ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
मुझे बचा और परदेसियों के हाथ से छुड़ा, जिनके मुँह से बेकारी निकलती रहती है, और जिनका दहना हाथ झूट का दहना हाथ है।
12 ೧೨ ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
जब हमारे बेटे जवानी में क़दआवर पौदों की तरह हों और हमारी बेटियाँ महल के कोने के लिए तराशे हुए पत्थरों की तरह हों,
13 ೧೩ ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
जब हमारे खत्ते भरे हों, जिनसे हर किस्म की जिन्स मिल सके, और हमारी भेड़ बकरियाँ हमारे कूचों में हज़ारों और लाखों बच्चे दें:
14 ೧೪ ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
जब हमारे बैल खू़ब लदे हों, जब न रखना हो न ख़ुरूज, और न हमारे कूचों में वावैला हो।
15 ೧೫ ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.
मुबारक है वह क़ौम जिसका यह हाल है। मुबारक है वह क़ौम जिसका ख़ुदा ख़ुदावन्द है।

< ಕೀರ್ತನೆಗಳು 144 >