< ಕೀರ್ತನೆಗಳು 145 >
1 ೧ ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
দাউদের প্রশংসাগীত। হে আমার ঈশ্বর, আমার রাজা, আমি তোমাকে মহিমান্বিত করব; চিরকাল আমি তোমার নামের প্রশংসা করব।
2 ೨ ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.
প্রতিদিন আমি প্রশংসা করব আর চিরকাল তোমার নামের উচ্চপ্রশংসা করব।
3 ೩ ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.
সদাপ্রভু মহান ও অতীব প্রশংসার যোগ্য; কেউ তাঁর মহানতার পরিমাপ করতে পারে না।
4 ೪ ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
এক প্রজন্ম তাদের সন্তানসন্ততিদের কাছে তোমার কাজের প্রশংসা করবে; আর তোমার পরাক্রমী কাজকর্ম বর্ণনা করবে।
5 ೫ ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
তারা তোমার মহিমার গৌরব ও প্রভা ঘোষণা করবে আর আমি তোমার আশ্চর্য কাজ ধ্যান করব।
6 ೬ ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
আর লোকে তোমার ভয়াবহ কাজের কথা বলবে, আর আমি তোমার মহিমা বর্ণনা করব।
7 ೭ ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
তারা তোমার অজস্র ধার্মিকতা প্রচার করবে, আর মহানন্দে তোমার ন্যায়পরায়ণতার বিষয়ে গান করবে।
8 ೮ ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
সদাপ্রভু কৃপাময় ও স্নেহশীল, ক্রোধে ধীর ও দয়াতে মহান।
9 ೯ ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
সদাপ্রভু সকলের প্রতি মঙ্গলময়; নিজের সব সৃষ্টির প্রতি তাঁর করুণা অপার।
10 ೧೦ ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
হে সদাপ্রভু, তোমার সব কাজকর্ম তোমার প্রশংসা করে; তোমার বিশ্বস্ত লোকেরা তোমার উচ্চপ্রশংসা করে।
11 ೧೧ ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
তোমার রাজ্যের মহিমা তারা প্রচার করে, আর তোমার পরাক্রমের কথা বলে,
12 ೧೨ ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
যেন সব মানুষ তোমার পরাক্রমী কাজকর্ম আর তোমার রাজ্যের অপরূপ প্রতাপের কথা জানতে পারে।
13 ೧೩ ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
তোমার রাজত্ব অনন্তকালস্থায়ী রাজত্ব, আর তোমার আধিপত্য বংশপরম্পরায় স্থায়ী। সদাপ্রভু তাঁর সব প্রতিশ্রুতিতে অবিচল, এবং তিনি যা করেন সবকিছুতেই নির্ভরযোগ্য।
14 ೧೪ ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
যারা পতনের সম্মুখীন, সদাপ্রভু তাদের সবাইকে ধরে রাখেন আর যারা অবনত তাদের সবাইকে তিনি তুলে ধরেন।
15 ೧೫ ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
সবার চোখ তোমার দিকে তাকিয়ে থাকে, আর যথাসময়ে তুমি তাদের খাবার জোগাও।
16 ೧೬ ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
তুমি তোমার হাত উন্মুক্ত করো, আর সব জীবন্ত প্রাণীর অভিলাষ পূর্ণ করো।
17 ೧೭ ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
সদাপ্রভু তাঁর সব কাজে ন্যায়পরায়ণ আর যা করেন সবকিছুতেই বিশ্বস্ত।
18 ೧೮ ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
সদাপ্রভু তাদের সবার কাছে আছেন যারা তাঁকে ডাকে, সবার কাছে আছেন যারা তাঁকে সত্যে আহ্বান করে।
19 ೧೯ ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
যারা তাঁকে সম্ভ্রম করে তিনি তাদের আকাঙ্ক্ষা পূর্ণ করেন; তিনি তাদের কান্না শোনেন আর তাদের রক্ষা করেন।
20 ೨೦ ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
যারা তাঁকে ভালোবাসে, তিনি তাদের প্রতি দৃষ্টি রাখেন, কিন্তু দুষ্টদের সবাইকে তিনি ধ্বংস করবেন।
21 ೨೧ ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.
আমার মুখ সদাপ্রভুর প্রশংসা করবে, আর প্রত্যেকটি প্রাণী যুগে যুগে ও চিরকাল তাঁর পবিত্র নামের প্রশংসা করবে।