< ಕೀರ್ತನೆಗಳು 145 >

1 ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
תְּהִלָּ֗ה לְדָ֫וִ֥ד אֲרֹומִמְךָ֣ אֱלֹוהַ֣י הַמֶּ֑לֶךְ וַאֲבָרֲכָ֥ה שִׁ֝מְךָ֗ לְעֹולָ֥ם וָעֶֽד׃
2 ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.
בְּכָל־יֹ֥ום אֲבָרֲכֶ֑ךָּ וַאֲהַלְלָ֥ה שִׁ֝מְךָ֗ לְעֹולָ֥ם וָעֶֽד׃
3 ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.
גָּ֘דֹ֤ול יְהוָ֣ה וּמְהֻלָּ֣ל מְאֹ֑ד וְ֝לִגְדֻלָּתֹ֗ו אֵ֣ין חֵֽקֶר׃
4 ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
דֹּ֣ור לְ֭דֹור יְשַׁבַּ֣ח מַעֲשֶׂ֑יךָ וּגְב֖וּרֹתֶ֣יךָ יַגִּֽידוּ׃
5 ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
הֲ֭דַר כְּבֹ֣וד הֹודֶ֑ךָ וְדִבְרֵ֖י נִפְלְאֹותֶ֣יךָ אָשִֽׂיחָה׃
6 ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
וֶעֱז֣וּז נֹורְאֹתֶ֣יךָ יֹאמֵ֑רוּ וּגְדוּלֹּתֶיךָ (וּגְדוּלָּתְךָ֥) אֲסַפְּרֶֽנָּה׃
7 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
זֵ֣כֶר רַב־טוּבְךָ֣ יַבִּ֑יעוּ וְצִדְקָתְךָ֥ יְרַנֵּֽנוּ׃
8 ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
חַנּ֣וּן וְרַח֣וּם יְהוָ֑ה אֶ֥רֶךְ אַ֝פַּ֗יִם וּגְדָל־חָֽסֶד׃
9 ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
טֹוב־יְהוָ֥ה לַכֹּ֑ל וְ֝רַחֲמָ֗יו עַל־כָּל־מַעֲשָֽׂיו׃
10 ೧೦ ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
יֹוד֣וּךָ יְ֭הוָה כָּל־מַעֲשֶׂ֑יךָ וַ֝חֲסִידֶ֗יךָ יְבָרֲכֽוּכָה׃
11 ೧೧ ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
כְּבֹ֣וד מַלְכוּתְךָ֣ יֹאמֵ֑רוּ וּגְבוּרָתְךָ֥ יְדַבֵּֽרוּ׃
12 ೧೨ ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
לְהֹודִ֤יעַ ׀ לִבְנֵ֣י הָ֭אָדָם גְּבוּרֹתָ֑יו וּ֝כְבֹ֗וד הֲדַ֣ר מַלְכוּתֹֽו׃
13 ೧೩ ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
מַֽלְכוּתְךָ֗ מַלְכ֥וּת כָּל־עֹֽלָמִ֑ים וּ֝מֶֽמְשֶׁלְתְּךָ֗ בְּכָל־דֹּ֥ור וָדֹֽור׃
14 ೧೪ ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
סֹומֵ֣ךְ יְ֭הוָה לְכָל־הַנֹּפְלִ֑ים וְ֝זֹוקֵ֗ף לְכָל־הַכְּפוּפִֽים׃
15 ೧೫ ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
עֵֽינֵי־כֹ֭ל אֵלֶ֣יךָ יְשַׂבֵּ֑רוּ וְאַתָּ֤ה נֹֽותֵן־לָהֶ֖ם אֶת־אָכְלָ֣ם בְּעִתֹּֽו׃
16 ೧೬ ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
פֹּותֵ֥חַ אֶת־יָדֶ֑ךָ וּמַשְׂבִּ֖יעַ לְכָל־חַ֣י רָצֹֽון׃
17 ೧೭ ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
צַדִּ֣יק יְ֭הוָה בְּכָל־דְּרָכָ֑יו וְ֝חָסִ֗יד בְּכָל־מַעֲשָֽׂיו׃
18 ೧೮ ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
קָרֹ֣וב יְ֭הוָה לְכָל־קֹרְאָ֑יו לְכֹ֤ל אֲשֶׁ֖ר יִקְרָאֻ֣הוּ בֶאֱמֶֽת׃
19 ೧೯ ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
רְצֹון־יְרֵאָ֥יו יַעֲשֶׂ֑ה וְֽאֶת־שַׁוְעָתָ֥ם יִ֝שְׁמַ֗ע וְיֹושִׁיעֵֽם׃
20 ೨೦ ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
שֹׁומֵ֣ר יְ֭הוָה אֶת־כָּל־אֹהֲבָ֑יו וְאֵ֖ת כָּל־הָרְשָׁעִ֣ים יַשְׁמִֽיד׃
21 ೨೧ ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.
תְּהִלַּ֥ת יְהוָ֗ה יְֽדַבֶּ֫ר־פִּ֥י וִיבָרֵ֣ךְ כָּל־בָּ֭שָׂר שֵׁ֥ם קָדְשֹׁ֗ו לְעֹולָ֥ם וָעֶֽד׃

< ಕೀರ್ತನೆಗಳು 145 >