< ಕೀರ್ತನೆಗಳು 146 >
1 ೧ ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.
Halelujah. Chval, duše má, Hospodina.
2 ೨ ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.
Chváliti budu Hospodina, dokud jsem živ, žalmy zpívati Bohu svému, dokud mne stává.
3 ೩ ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
Nedoufejtež v knížatech, v synech lidských, v nichž není vysvobození.
4 ೪ ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
Vychází duch jejich, navracují se do země své, v tentýž den mizejí myšlení jejich.
5 ೫ ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
Blahoslavený ten, jehož spomocník jest Bůh silný Jákobův, jehož naděje jest v Hospodinu Bohu jeho,
6 ೬ ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,
Kterýž učinil nebe, zemi, moře, i vše, což v nich jest, kterýž ostříhá pravdy až na věky,
7 ೭ ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
Kterýž činí soud utištěným, dává chléb lačným. Hospodin vysvobozuje vězně.
8 ೮ ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
Hospodin otvírá oči slepých, Hospodin pozdvihuje snížených, Hospodin miluje spravedlivé.
9 ೯ ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
Hospodin ostříhá příchozích, sirotku a vdově pomáhá, ale cestu bezbožných podvrací.
10 ೧೦ ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!
Kralovati bude Hospodin na věky, Bůh tvůj, ó Sione, od národu až do pronárodu. Halelujah.