< ಕೀರ್ತನೆಗಳು 148 >

1 ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
הללו יה הללו את יהוה מן השמים הללוהו במרומים׃
2 ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
הללוהו כל מלאכיו הללוהו כל צבאו׃
3 ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
הללוהו שמש וירח הללוהו כל כוכבי אור׃
4 ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.
הללוהו שמי השמים והמים אשר מעל השמים׃
5 ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.
יהללו את שם יהוה כי הוא צוה ונבראו׃
6 ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
ויעמידם לעד לעולם חק נתן ולא יעבור׃
7 ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು
הללו את יהוה מן הארץ תנינים וכל תהמות׃
8 ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
אש וברד שלג וקיטור רוח סערה עשה דברו׃
9 ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು,
ההרים וכל גבעות עץ פרי וכל ארזים׃
10 ೧೦ ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,
החיה וכל בהמה רמש וצפור כנף׃
11 ೧೧ ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
מלכי ארץ וכל לאמים שרים וכל שפטי ארץ׃
12 ೧೨ ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು
בחורים וגם בתולות זקנים עם נערים׃
13 ೧೩ ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
יהללו את שם יהוה כי נשגב שמו לבדו הודו על ארץ ושמים׃
14 ೧೪ ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!
וירם קרן לעמו תהלה לכל חסידיו לבני ישראל עם קרבו הללו יה׃

< ಕೀರ್ತನೆಗಳು 148 >