< ಕೀರ್ತನೆಗಳು 148 >
1 ೧ ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
Алілуя! Хваліть Господа з небес, прославляйте Його на висотах.
2 ೨ ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
Хваліть Його, усі ангели Його, прославляйте Його, усі воїнства Його.
3 ೩ ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
Хваліть Його, сонце і місяць, прославляйте Його, усі ясні зорі.
4 ೪ ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.
Хваліть Його, небеса небес, і води, що над небесами.
5 ೫ ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.
Хваліть ім’я Господа, бо Він наказав – і вони були створені.
6 ೬ ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
Він утвердив їх на віки вічні – дав постанову, що не буде скасована.
7 ೭ ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು
Хваліть Господа з землі, морські чудовиська й усі безодні [океану],
8 ೮ ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
вогонь і град, сніг і туман, вітер бурхливий, що виконує Його слово,
9 ೯ ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು,
гори й усі пагорби, дерева плодоносні й усі кедри,
10 ೧೦ ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,
звірі й уся худоба, живина плазуюча й птахи крилаті,
11 ೧೧ ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
царі земні й усі племена, князі й усі судді землі,
12 ೧೨ ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು
юнаки й дівчата, старі з юними –
13 ೧೩ ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
хваліть ім’я Господа, бо лише Його ім’я піднесене й велич Його – над землею й небесами!
14 ೧೪ ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!
Він підняв ріг народу Свого, прославив вірних Своїх – синів Ізраїлевих, народу, що близький Йому. Алілуя!