< ಕೀರ್ತನೆಗಳು 149 >
1 ೧ ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
亞肋路亞!請您們向上主謳唱新歌,在聖者集會中向他祝賀!
2 ೨ ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
願以色列因自己的創造者而踴躍,願熙雍子民因自己的君王而歡樂!
3 ೩ ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
願他們以舞蹈讚美上主的名,願他們敲鼓彈琴向上主歌詠!
4 ೪ ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
因為上主喜愛自己的百姓,賞賜謙虛的人凱旋而得勝。
5 ೫ ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
願聖徒因所受的光榮而喜慶,在自己的床榻上歡呼而歌頌。
6 ೬ ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
願讚美天主的歌辭在他們的口中,願雙刃的寶劍掌握在他們的手中,
7 ೭ ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;
為向異邦報仇雪恥,為向列國進攻襲擊,
8 ೮ ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
要用鎖鍊捆住他們的國君,要用銬鐐鎖住他們的縉紳,
9 ೯ ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.
為向他們施行經上的審訊。這也就是一切聖徒的光榮。