< ಕೀರ್ತನೆಗಳು 15 >

1 ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
(다윗의 시) 여호와여, 주의 장막에 유할 자 누구오며 주의 성산에 거할 자 누구오니이까
2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
정직하게 행하며 공의를 일삼으며 그 마음에 진실을 말하며
3 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.
그 혀로 참소치 아니하고 그 벗에게 행악지 아니하며 그 이웃을 훼방치 아니하며
4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
그 눈은 망령된 자를 멸시하며 여호와를 두려워하는 자를 존대하며 그 마음에 서원한 것은 해로울지라도 변치 아니하며
5 ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
변리로 대금치 아니하며 뇌물을 받고 무죄한 자를 해치 아니하는 자니 이런 일을 행하는 자는 영영히 요동치 아니하리이다

< ಕೀರ್ತನೆಗಳು 15 >