< ಕೀರ್ತನೆಗಳು 15 >
1 ೧ ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
Zaburi ya Daudi. Bwana, ni nani awezaye kukaa katika Hekalu lako? Nani awezaye kuishi katika mlima wako mtakatifu?
2 ೨ ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
Ni yule aendaye pasipo mawaa, atendaye yaliyo haki, asemaye kweli toka moyoni mwake,
3 ೩ ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.
na hana masingizio ulimini mwake, asiyemtenda jirani yake vibaya, na asiyemsingizia mwenzake,
4 ೪ ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
ambaye humdharau mtu mbaya, lakini huwaheshimu wale wamwogopao Bwana, yule atunzaye kiapo chake hata kama anaumia.
5 ೫ ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
Yeye akopeshaye fedha yake bila riba, na hapokei rushwa dhidi ya mtu asiye na hatia. Mtu afanyaye haya kamwe hatatikisika.