< ಕೀರ್ತನೆಗಳು 16 >
1 ೧ ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
(En miktam af David.) Vogt mig, Gud, thi jeg lider på dig!
2 ೨ ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.
Jeg siger til HERREN: "Du er min Herre; jeg har ikke andet Gode end dig.
3 ೩ ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.
De hellige, som er i Landet, de er de herlige, hvem al min Hu står til."
4 ೪ ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
Mange Kvaler rammer dem, som vælger en anden Gud; deres Blodofre vil jeg ikke udgyde, ej tage deres Navn i min Mund.
5 ೫ ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.
HERREN er min tilmålte Del og mit Bæger. Du holder min Arvelod i Hævd.
6 ೬ ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.
Snorene faldt mig på liflige Steder, ja, en dejlig Arvelod tilfaldt mig.
7 ೭ ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
Jeg vil prise HERREN, der gav mig Råd, mine Nyrer maner mig, selv om Natten.
8 ೮ ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
Jeg har altid HERREN for Øje, han er ved min højre, jeg rokkes ikke.
9 ೯ ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು.
Derfor glædes mit Hjerte, min Ære jubler, endogså mit Kød skal bo i Tryghed.
10 ೧೦ ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. (Sheol )
Thi Dødsriget giver du ikke min Sjæl, lader ikke din hellige skue Graven. (Sheol )
11 ೧೧ ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
Du lærer mig Livets Vej; man mættes af Glæde for dit Åsyn, Livsalighed er i din højre for evigt.